TSK

TSK · ನ್ಯಾಯಸ್ಥಾಪಕರು 2:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಈ ಇಸ್ರಾಯೇಲರು ಯೆಹೋವನ ದೃಷ್ಟಿಯಲ್ಲಿ ಕೆಟ್ಟದನ್ನು ಮಾಡಿದರು ಹಾಗೂ ಬಾಳನನ್ನು ಸೇವಿಸಿದರು.

¶ ಇಸ್ರಾಯೇಲರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ, ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಯೆಹೋವನನ್ನು ಮರೆತು ಆತನನ್ನು ಆರಾಧಿಸುವುದನ್ನು ಬಿಟ್ಟೇಬಿಟ್ಟರು.

ಆಗ ಅವರು ಯೆಹೋವನಿಗೆ, ‘ನಾವು ಯೆಹೋವನಾದ ನಿನ್ನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸಿ ಪಾಪಮಾಡಿದ್ದೇವೆ. ಈಗ ಕೃಪೆಮಾಡಿ ನಮ್ಮನ್ನು ಶತ್ರುಗಳ ಕೈಯಿಂದ ಬಿಡಿಸು; ನಾವು ಇನ್ನು ಮುಂದೆ ನಿನ್ನನ್ನೇ ಸೇವಿಸುವೆವು’ ಎಂದು ಮೊರೆಯಿಟ್ಟರು.

ಅವನು ಚೀದೋನ್ಯರ ಅಷ್ಟೋರೆತ್ ದೇವತೆಯನ್ನೂ, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹವನ್ನು ಆರಾಧಿಸತೊಡಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

ಇಸ್ರಾಯೇಲರ ಅರಸನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್ ದೇವತೆ, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಯೆರೂಸಲೇಮಿನ ಎದುರಿನಲ್ಲಿಯೂ, ವಿಘ್ನಪರ್ವತದ ದಕ್ಷಿಣದಿಕ್ಕಿನಲ್ಲಿಯೂ ಸ್ಥಾಪಿಸಿದ್ದ ಪೂಜಾಸ್ಥಳಗಳನ್ನು ಅರಸನು ಹೊಲೆ ಮಾಡಿದನು.

ಅವನು ಬೆನ್ ಹಿನ್ನೋಮ್ ಎಂಬ ತಗ್ಗಿನಲ್ಲಿ ಧೂಪ ಹಾಕಿಸಿದ್ದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯ ಕಾರ್ಯಗಳನ್ನು ಅನುಸರಿಸಿ ತನ್ನ ಮಕ್ಕಳನ್ನು ಅಗ್ನಿಪ್ರವೇಶ ಮಾಡಿಸಿದನು.

ಅವರ ವಿಗ್ರಹಗಳನ್ನು ಸೇವಿಸಿದರು; ಅವು ಅವರಿಗೆ ಉರುಲಿನಂತಾದವು.

ನೀನು ಅವರಿಗೆ ಹೀಗೆ ಹೇಳಬೇಕು, ‘ಯೆಹೋವನ ಮಾತನ್ನು ಕೇಳಿರಿ, ನಿಮ್ಮ ಪೂರ್ವಿಕರು ನನ್ನನ್ನು ತೊರೆದು ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ, ಪೂಜಿಸಿ ನನ್ನನ್ನು ಬಿಟ್ಟು, ನನ್ನ ಧರ್ಮವಿಧಿಗಳನ್ನು ಮೀರಿದ್ದರಿಂದಲೂ,

ಆದರೆ ಅನ್ಯಜನರು ತಾವು ಅರ್ಪಿಸುವ ಬಲಿಗಳನ್ನು ದೇವರಿಗಲ್ಲ, ದೆವ್ವಗಳಿಗೆ ಅರ್ಪಿಸುತ್ತಾರೆಂಬುದು ನನ್ನ ಅಭಿಪ್ರಾಯವು. ನೀವು ದೆವ್ವಗಳೊಡನೆ ಪಾಲುಗಾರರಾಗಿರಬೇಕೆಂಬುದು ನನ್ನ ಇಷ್ಟವಲ್ಲ.