ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ರಕ್ಷಿಸುವುದಕ್ಕೋಸ್ಕರ ಬೆನ್ಯಾಮೀನ್ ಕುಲದ ಗೇರನ ಮಗನಾದ ಏಹೂದನನ್ನು ಎಬ್ಬಿಸಿದನು. ಅವನು ಎಡಚನಾಗಿದ್ದನು. ಇಸ್ರಾಯೇಲರು ಅವನ ಮೂಲಕವಾಗಿ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು.
TSK
TSK · ನ್ಯಾಯಸ್ಥಾಪಕರು 2:16
Treasury of Scripture Knowledge references in ಕನ್ನಡ IRV.
ಆಕೆ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿರುವ ದೆಬೋರಳ ಖರ್ಜೂರ ವೃಕ್ಷವೆಂದು ಹೆಸರುಗೊಂಡ ಮರದ ಕೆಳಗೆ ಕುಳಿತುಕೊಂಡಿರುತ್ತಿದ್ದಳು. ಇಸ್ರಾಯೇಲರು ನ್ಯಾಯತೀರ್ಪಿಗಾಗಿ ಆಕೆಯ ಬಳಿಗೆ ಬರುತ್ತಿದ್ದರು.
¶ ಅಬೀಮೆಲೆಕನ ಮರಣದ ತರುವಾಯ ಇಸ್ಸಾಕಾರ್ ಕುಲದ ಪೂವನ ಮಗನೂ, ದೋದೋವಿನ ಮೊಮ್ಮಗನೂ ಆಗಿದ್ದ ತೋಲನು ಇಸ್ರಾಯೇಲ್ಯರನ್ನು ರಕ್ಷಿಸಿವುದಕ್ಕೋಸ್ಕರ ಎದ್ದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ಶಾಮೀರೆಂಬ ಊರಲ್ಲಿ ವಾಸವಾಗಿದ್ದನು.
¶ ನ್ಯಾಯಸ್ಥಾಪಕರು ಆಳುತ್ತಿದ್ದ ಕಾಲದಲ್ಲಿ ಒಮ್ಮೆ ದೇಶದಲ್ಲಿ ಬರ ಬಂದಿದ್ದರಿಂದ ಯೆಹೂದ ಪ್ರಾಂತ್ಯದ ಬೇತ್ಲೆಹೇಮಿನವನೊಬ್ಬನು ತನ್ನ ಹೆಂಡತಿ, ಇಬ್ಬರು ಪುತ್ರರ ಸಹಿತವಾಗಿ ಮೋವಾಬ್ ದೇಶದಲ್ಲಿ ವಾಸಮಾಡುವುದಕ್ಕಾಗಿ ಹೊರಟುಹೋದನು.
ಇದಲ್ಲದೆ ಅವನು ಅಮಾಲೇಕ್ಯರಿಗೆ ವಿರೋಧವಾಗಿ ದಂಡೆತ್ತಿ ಹೋಗಿ ಪರಾಕ್ರಮದಿಂದ ಅವರನ್ನು ಸದೆಬಡಿದನು. ಇಸ್ರಾಯೇಲ್ಯರನ್ನು ಸುಲಿಗೆಮಾಡುವವರ ಕೈಗೆ ಸಿಕ್ಕದಂತೆ ತಪ್ಪಿಸಿದನು.
ಆದ್ದರಿಂದ ನೀನು ಅವರನ್ನು ದಂಡಿಸುವ ವಿರೋಧಿಗಳ ಕೈಗೆ ಒಪ್ಪಿಸಿದೆ. ಅವರು ತಮ್ಮ ಕಷ್ಟಕಾಲದಲ್ಲಿ ನಿನಗೆ ಮೊರೆಯಿಡಲು ಪರಲೋಕದಿಂದ ನೀನು ಅವರಿಗೆ ಕಿವಿಗೊಟ್ಟು ನಿನ್ನ ಕರುಣಾತಿಶಯದಿಂದ ರಕ್ಷಕರನ್ನು ಕಳುಹಿಸಿ ವಿರೋಧಿಗಳ ಕೈಯಿಂದ ಅವರನ್ನು ಪಾರುಮಾಡಿದೆ.
ಇಷ್ಟರೊಳಗೆ ಸುಮಾರು ನಾನೂರೈವತ್ತು ವರ್ಷಗಳು ಗತಿಸಿದವು. ಇದಾದ ಮೇಲೆ ಪ್ರವಾದಿಯಾದ ಸಮುವೇಲನ ಕಾಲದ ವರೆಗೆ ನ್ಯಾಯಾಧಿಪತಿಗಳನ್ನು ಕೊಟ್ಟನು.