TSK

TSK · ನ್ಯಾಯಸ್ಥಾಪಕರು 2:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀವು ಆ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡಬೇಕಾದೀತು,

ನೀನು ಐಗುಪ್ತ ದೇಶದಿಂದ ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು. ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಬೇಕಾದ ಲೋಹದ ವಿಗ್ರಹವನ್ನು ಮಾಡಿಸಿಕೊಂಡಿದ್ದಾರೆ” ಎಂದು ಹೇಳಿದನು.

¶ ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.

ಅದಕ್ಕೆ ಜನರು, “ನಮ್ಮ ದೇವರಾದ ಯೆಹೋವನನ್ನೇ ಸೇವಿಸುತ್ತೇವೆ. ಆತನ ಮಾತನ್ನೇ ಕೇಳುತ್ತೇವೆ” ಎಂದರು.

ಯೆಹೋಶುವನ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಬದುಕಿದ್ದ, ಯೆಹೋವನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲರು ಯೆಹೋವನನ್ನು ಸೇವಿಸುತ್ತಿದ್ದರು.

ಅವನಿಗೆ, “ನೀನಂತೂ ಮುದುಕನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುತ್ತಿಲ್ಲ. ಆದ್ದರಿಂದ ಬೇರೆ ಎಲ್ಲಾ ಜನಾಂಗಗಳಿಗೆ ಇರುವಂತೆ ನಮಗೂ ಒಬ್ಬ ಅರಸನನ್ನು ನೇಮಿಸಿಕೊಡು. ಅವನೇ ನಮ್ಮ ನ್ಯಾಯಸ್ಥಾಪಕನಾಗಿರಲಿ” ಅಂದರು.

ನಾನು ಯೆಹೋವನಿಗೆ ಮೊರೆಯಿಡುವೆನು; ಈಗ ಗೋದಿಯ ಸುಗ್ಗಿಯಿದ್ದರೂ ಆತನು ಗುಡುಗನ್ನೂ, ಮಳೆಯನ್ನೂ ಕಳುಹಿಸುವುದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತನ್ನ ದೃಷ್ಟಿಯಲ್ಲಿ ತಪ್ಪು ಎಂಬುದನ್ನು ತೋರಿಸಿಕೊಡುವನು” ಎಂದು ಅವರಿಗೆ ಹೇಳಿ ಯೆಹೋವನಿಗೆ ಮೊರೆಯಿಟ್ಟನು.

¶ ಅವರ ಪೂರ್ವಿಕರ ದೇವರಾದ ಯೆಹೋವನು ತನ್ನ ಪ್ರಜೆಗಳನ್ನು, ತನ್ನ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಬಂದರು.

ಇಗೋ, ನಿನ್ನನ್ನು ಬಿಟ್ಟವರು ನಾಶವಾಗುವರು; ನಿನಗೆ ದ್ರೋಹ ಮಾಡಿದವರೆಲ್ಲರನ್ನು ನಿರ್ಮೂಲ ಮಾಡುತ್ತೀ.

ಆತನು ಅವರನ್ನು ಅನೇಕಾವರ್ತಿ ರಕ್ಷಿಸಿದರೂ, ಅವರು ತಮ್ಮ ಆಲೋಚನೆಯನ್ನೇ ಅನುಸರಿಸಿ ಅವಿಧೇಯರಾದರು; ತಮ್ಮ ಅಕ್ರಮದಿಂದಲೇ ಹೀನಸ್ಥಿತಿಗೆ ಬಂದರು.

ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು.

¶ ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ಬಿಟ್ಟು, ಇಷ್ಟು ಬೇಗನೆ ಬೇರೆ ಸುವಾರ್ತೆಯ ಕಡೆಗೆ ನೀವು ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.