TSK

TSK · ನ್ಯಾಯಸ್ಥಾಪಕರು 21:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿಜವೆಂದು ತಿಳಿದುಬಂದರೆ ಆ ಊರನ್ನು ಸಂಪೂರ್ಣವಾಗಿ ಹಾಳು ಮಾಡಿ, ಅದರಲ್ಲಿರುವ ಎಲ್ಲಾ ಜನರನ್ನೂ, ದನಗಳನ್ನೂ ಕತ್ತಿಯಿಂದ ಸಂಹರಿಸಿಡಬೇಕು.

ಮೇರೋಜ್ ಊರನ್ನು ಶಪಿಸಿರೆಂದು ಯೆಹೋವನ ದೂತನು ಹೇಳುತ್ತಾನೆ. ‘ಅದರ ನಿವಾಸಿಗಳು ಯೆಹೋವನ ಸಹಾಯಕ್ಕೆ ಬರಲಿಲ್ಲ. ಯುದ್ಧವೀರರ ಹೋರಾಟದ ವಿರುದ್ಧ ಯೆಹೋವನ ಸಹಾಯಕ್ಕೆ ಬರಲಿಲ್ಲವಲ್ಲಾ; ಅವರನ್ನು ಶಪಿಸೇ ಶಪಿಸಿರಿ!’

ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿ, “ಯಾರು ಸೌಲ, ಸಮುವೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳು ಹೀಗೆಯೇ ಕಡಿಯಲ್ಪಡುವವು” ಎಂದು ಹೇಳಿ ಕಳುಹಿಸಿದನು. ಯೆಹೋವನಿಗೆ ಭಯಪಟ್ಟು ಜನರೆಲ್ಲರೂ ಏಕಮನಸ್ಸಿನಿಂದ ಬೆಜೆಕಿನಲ್ಲಿ ಕೂಡಿಬಂದರು.