TSK

TSK · ನ್ಯಾಯಸ್ಥಾಪಕರು 21:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳು ಇವೇ; ಈ ದಿನಗಳಲ್ಲಿ ದೇವಾರಾಧನೆಗಾಗಿ ಜನರು ಸಭೆಸೇರಿಬರಬೇಕೆಂದು ಸಾರಬೇಕು. ನಾನು ನೇಮಿಸಿರುವ ಹಬ್ಬದ ದಿನಗಳು ಇವೇ.

ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.

“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲುಗೊಂಡು ಏಳು ದಿನಗಳ ವರೆಗೆ ಪರ್ಣಶಾಲೆಗಳ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು.

¶ “‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಯೆಹೋವನು ನೇಮಿಸಿದ ಹಬ್ಬವಾಗಬೇಕು.

¶ “‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೀವು ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಯೆಹೋವನಿಗೆ ಉತ್ಸವವನ್ನು ಆಚರಿಸಬೇಕು.

ಆ ಏಳು ವಾರಗಳಾದ ನಂತರ ಪಂಚಾಶತ್ತಮ ದಿನದ ಹಬ್ಬವನ್ನು ಆಚರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಆತನಿಗೋಸ್ಕರ ತರಬೇಕು.

¶ ದೇಶವೆಲ್ಲಾ ತಮ್ಮ ವಶವಾದ ಮೇಲೆ ಇಸ್ರಾಯೇಲ್ಯ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.

ಅವನು ಪ್ರತಿವರ್ಷವೂ ಸೇನಾಧೀಶ್ವರನಾದ ಯೆಹೋವನಿಗೆ ಯಜ್ಞವನ್ನು ಸಮರ್ಪಿಸಿ ಆತನನ್ನು ಆರಾಧಿಸುವುದಕ್ಕೋಸ್ಕರ ತನ್ನ ಊರಿನಿಂದ ಶೀಲೋವಿಗೆ ಹೋಗುತ್ತಿದ್ದನು. ಅಲ್ಲಿ ಏಲಿಯನ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸ್ ಎಂಬವರು ಯೆಹೋವನ ಯಾಜಕರಾಗಿದ್ದರು.

¶ ಇದಾದ ಮೇಲೆ ಯೆಹೂದ್ಯರ ಒಂದು ಜಾತ್ರೆ ಇದ್ದುದರಿಂದ ಯೇಸು ಯೆರೂಸಲೇಮಿಗೆ ಹೋದನು.