TSK

TSK · ನ್ಯಾಯಸ್ಥಾಪಕರು 3:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಕೂಡಲೆ ಮಹಾಯಾಜಕನಾದ ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನಾದ ಫೀನೆಹಾಸನು ಸಭೆಯ ಮಧ್ಯದಲ್ಲಿ ಎದ್ದು ಈಟಿಯನ್ನು ಕೈಯಲ್ಲಿ ಹಿಡಿದುಕೊಂಡನು.

ಆದರೆ ಸಮುವೇಲನು ಅವನಿಗೆ, “ನಿನ್ನ ಕತ್ತಿಯು ಅನೇಕ ಸ್ತ್ರೀಯರಿಗೆ ಪುತ್ರಶೋಕವನ್ನುಂಟುಮಾಡಿದೆ; ಅದರಂತೆ ನಿನ್ನ ತಾಯಿಯು ಎಲ್ಲರಿಗಿಂತಲೂ ಹೆಚ್ಚಾಗಿ ಪುತ್ರಶೋಕವನ್ನು ಅನುಭವಿಸಲಿ” ಎಂದು ಹೇಳಿ ಅವನನ್ನು ಗಿಲ್ಗಾಲಿನಲ್ಲಿ ಯೆಹೋವನ ಸನ್ನಿಧಿಯಲ್ಲೇ ಕಡಿದುಹಾಕಿದನು.

ಆಗ ಯಾವನಾದರೂ ಮತ್ತೆ ಪ್ರವಾದನೆಮಾಡಿದರೆ ಅವನ ಹೆತ್ತ ತಾಯಿತಂದೆಗಳು ಅವನಿಗೆ, ‘ನೀನು ಉಳಿಯಬೇಡ; ಯೆಹೋವನ ಹೆಸರೆತ್ತಿ ಸುಳ್ಳಾಡುತ್ತಿ’ ಎಂದು ಹೇಳಿ ಆ ಹೆತ್ತ ತಾಯಿತಂದೆಗಳೇ ಅವನ ಪ್ರವಾದನೆಯ ನಿಮಿತ್ತ ಅವನನ್ನು ಇರಿದುಬಿಡುವರು.