ಅದಲ್ಲದೆ ನೀವು ನಿಮ್ಮ ಪುತ್ರರಿಗಾಗಿ ಅವರಲ್ಲಿ ಪುತ್ರಿಯರನ್ನು ತೆಗೆದುಕೊಳ್ಳುವುದಕ್ಕೆ ಅದು ಮಾರ್ಗವಾಗುವುದು; ತರುವಾಯ ಆ ಸೊಸೆಯರು ತವರುಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನೂ ಅನ್ಯದೇವರುಗಳ ಪೂಜೆ ಎಂಬ ವ್ಯಭಿಚಾರಕ್ಕೆ ಎಳೆದಾರು, ಎಚ್ಚರ.
TSK
TSK · ನ್ಯಾಯಸ್ಥಾಪಕರು 3:6
Treasury of Scripture Knowledge references in ಕನ್ನಡ IRV.
ವಿಮೋಚನಕಾಂಡ 34:16
TSK
1 ಅರಸುಗಳು 11:1
TSK
¶ ಅರಸನಾದ ಸೊಲೊಮೋನನು ಫರೋಹನ ಮಗಳನ್ನಲ್ಲದೆ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೀದೋನ್ಯರು ಮತ್ತು ಹಿತ್ತಿಯರು ಎಂಬ ಜನಾಂಗಗಳ ಸ್ತ್ರೀಯರನ್ನು ಮೋಹಿಸಿದನು.
ಎಜ್ರನು 9:11
TSK
ನೀನು ನಿನ್ನ ಸೇವಕರಾದ ಪ್ರವಾದಿಗಳ ಮುಖಾಂತರ ನಮಗೆ, ‘ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶವು ಅನ್ಯದೇಶಗಳವರ ಅಶುದ್ಧತ್ವದಿಂದಲೂ, ಅವರ ವಿಗ್ರಹಗಳಿಂದಲೂ ಮಲಿನವಾಗಿದೆ. ಆ ದೇಶವು ಎಲ್ಲೆಲ್ಲೂ ಆ ವಿಗ್ರಹಗಳ ಅಸಹ್ಯತೆಯಿಂದ ತುಂಬಿರುತ್ತದೆ.
ಯೆಹೆಜ್ಕೇಲನು 16:3
TSK
ಕರ್ತನಾದ ಯೆಹೋವನು ಯೆರೂಸಲೇಮ್ ಎಂಬಾಕೆಗೆ ಈ ಮಾತನ್ನು ಹೇಳಿಕಳುಹಿಸಿದ್ದಾನೆ, ‘ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ, ಅದೇ ನಿನ್ನ ಜನ್ಮಭೂಮಿ, ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.