TSK

TSK · ನ್ಯಾಯಸ್ಥಾಪಕರು 3:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಹೀಗಿರುವುದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ, ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವ ವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮತ್ತು ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.

ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ ಒಂದು ವೇಳೆ ನೀವು ಅಹಂಕಾರದಿಂದ ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟೀರಿ.

¶ ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಟ್ಟಿಸಿಕೊಳ್ಳುವ ಯಜ್ಞವೇದಿಯ ಬಳಿಯಲ್ಲಿ, ಅಶೇರ ವಿಗ್ರಹಕ್ಕೆ ಸಂಬಂಧಪಟ್ಟ ಯಾವ ಮರದ ಸ್ತಂಭವನ್ನೂ ನೆಡಬಾರದು.

ಅವರು ಯೆಹೋವನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸುವವರಾದರು.

¶ ಅದೇ ದಿನ ರಾತ್ರಿಯಲ್ಲಿ ಯೆಹೋವನು ಅವನಿಗೆ, “ನೀನು ನಿನ್ನ ತಂದೆಯ ಹೋರಿಗಳಲ್ಲಿ ಒಂದು ಚಿಕ್ಕ ಹೋರಿಯನ್ನೂ, ಏಳು ವರ್ಷದ ಇನ್ನೊಂದು ಹೋರಿಯನ್ನೂ ತೆಗೆದುಕೊಂಡು ಹೋಗಿ ನಿನ್ನ ತಂದೆಯು ಕಟ್ಟಿರುವ ಬಾಳನ ಯಜ್ಞವೇದಿಯನ್ನು ಕೆಡವಿ, ಅದರ ಬಳಿಯಲ್ಲಿರುವ ಅಶೇರವೆಂಬ ವಿಗ್ರಹಸ್ತಂಭವನ್ನು ಕಡಿದುಹಾಕು.

ಅವರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಡಲು ಆತನು ಅವರನ್ನು ಹಾಚೋರಿನ ಸೇನಾಧಿಪತಿಯಾದ ಸೀಸೆರನಿಗೂ, ಫಿಲಿಷ್ಟಿಯರಿಗೂ, ಮೋವಾಬ್‌ ರಾಜನಿಗೂ ಮಾರಿಬಿಟ್ಟನು. ಇವರು ಬಂದು ಅವರೊಡನೆ ಯುದ್ಧಮಾಡಿದರು.

ನೀನು ಈಗ ಎಲ್ಲಾ ಇಸ್ರಾಯೇಲರನ್ನೂ, ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತು ಪ್ರವಾದಿಗಳನ್ನು ಮತ್ತು ಅಶೇರ ದೇವತೆಯ ನಾನೂರು ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಕರೆಯಿಸು” ಎಂದು ಹೇಳಿದನು.

ಕಲ್ಲು ಕಂಬಗಳನ್ನು ಒಡೆದುಹಾಕಿ ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಬಿಟ್ಟು ಅವುಗಳಲ್ಲಿದ್ದ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.

ಅಂದಿನಿಂದ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಆಲಯವನ್ನು ನಿರಾಕರಿಸಿ, ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಪೂಜಿಸುವವರಾದರು. ಅವರ ಈ ಅಪರಾಧದ ದೆಸೆಯಿಂದ ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಯೆಹೋವನಿಗೆ ಕೋಪವುಂಟಾಯಿತು.

ಅವನ ದೇವರಿಗೆ ಮಾಡಿದ ಪ್ರಾರ್ಥನೆಯೂ, ಅವನಿಗೆ ದೊರಕಿದ ಸದುತ್ತರವೂ, ಅವನು ತನ್ನನ್ನು ತಗ್ಗಿಸಿಕೊಳ್ಳುವುದಕ್ಕಿಂತ ಮೊದಲು ಮಾಡಿದ ಅಪರಾಧದ್ರೋಹಗಳೂ, ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ನಿರ್ಮಿಸಿ ಅಶೇರ ಸ್ತಂಭ ವಿಗ್ರಹ ಇವುಗಳನ್ನು ನಿಲ್ಲಿಸಿದ್ದೂ ದರ್ಶಕರ ಚರಿತ್ರೆಯಲ್ಲಿ ಬರೆದಿರುತ್ತವೆ.

ಯಜ್ಞವೇದಿಗಳನ್ನು ಕೆಡವಿಸಿ ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಒಡೆದು ಪುಡಿಪುಡಿ ಮಾಡಿಸಿ ಇಸ್ರಾಯೇಲ್ ದೇಶದಲ್ಲಿದ್ದ ಸೂರ್ಯಸ್ತಂಭಗಳನ್ನು ಕೆಡವಿಹಾಕಿಸಿ ಯೆರೂಸಲೇಮಿಗೆ ಹಿಂದಿರುಗಿದನು.

ಅವರ ವಿಗ್ರಹಗಳನ್ನು ಸೇವಿಸಿದರು; ಅವು ಅವರಿಗೆ ಉರುಲಿನಂತಾದವು.