TSK

TSK · ನ್ಯಾಯಸ್ಥಾಪಕರು 3:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನ ತಮ್ಮನೂ, ಕೆನಜನ ಮಗನೂ ಆದ ಒತ್ನೀಯೇಲನು ಕಿರ್ಯತ್ ಸೇಫೆರನ್ನು ವಶಪಡಿಸಿಕೊಂಡನು. ಆಗ ಕಾಲೇಬನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿಕೊಟ್ಟನು.

ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ, ಕನಿಕರಪಟ್ಟು, ನ್ಯಾಯಸ್ಥಾಪಕರನ್ನು ಎಬ್ಬಿಸಿ ಜೀವಮಾನವೆಲ್ಲಾ ಅವರ ಸಂಗಡ ಇದ್ದನು. ಅವರ ಮೂಲಕವಾಗಿ ಇಸ್ರಾಯೇಲರನ್ನು ಶತ್ರುಗಳಿಂದ ಬಿಡಿಸಿದನು.

ಒಂಭೈನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರ್ಷಗಳ ಕಾಲ ಕಠಿಣವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು.

ಆಗ ಅವರು ಯೆಹೋವನಿಗೆ, “ನಾವು ನಮ್ಮ ದೇವರಾದ ನಿನ್ನನ್ನು ಬಿಟ್ಟು, ಬಾಳನ ಪ್ರತಿಮೆಗಳನ್ನು ಪೂಜಿಸಿ, ನಿನಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಮೊರೆಯಿಟ್ಟರು.

ಆದ್ದರಿಂದ ನೀನು ಅವರನ್ನು ದಂಡಿಸುವ ವಿರೋಧಿಗಳ ಕೈಗೆ ಒಪ್ಪಿಸಿದೆ. ಅವರು ತಮ್ಮ ಕಷ್ಟಕಾಲದಲ್ಲಿ ನಿನಗೆ ಮೊರೆಯಿಡಲು ಪರಲೋಕದಿಂದ ನೀನು ಅವರಿಗೆ ಕಿವಿಗೊಟ್ಟು ನಿನ್ನ ಕರುಣಾತಿಶಯದಿಂದ ರಕ್ಷಕರನ್ನು ಕಳುಹಿಸಿ ವಿರೋಧಿಗಳ ಕೈಯಿಂದ ಅವರನ್ನು ಪಾರುಮಾಡಿದೆ.

ಸಂಹಾರವಾಗುವಾಗೆಲ್ಲಾ ಅವರು ದೇವರನ್ನು ನೆನಸಿ, ಪುನಃ ಆತನ ಪ್ರಸನ್ನತೆಯನ್ನು ಬಯಸಿ,

ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು.