ಆಕೆ ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗನಾದ ಬಾರಾಕನನ್ನು ಬರಲು ಹೇಳಿ ಅವನಿಗೆ, “ನಿಶ್ಚಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ನಿನಗೆ, ‘ಎದ್ದು ನಫ್ತಾಲಿ, ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.
TSK
TSK · ನ್ಯಾಯಸ್ಥಾಪಕರು 4:10
Treasury of Scripture Knowledge references in ಕನ್ನಡ IRV.
ದೆಬೋರಳ ಜೊತೆಯಲ್ಲಿ ಇಸ್ಸಾಕಾರ್ ಕುಲಪ್ರಭುಗಳೂ ಇಸ್ಸಾಕಾರರೊಡನೆ ಬಾರಾಕನೂ ಆಗಮಿಸಿದರು. ಇವರೆಲ್ಲರೂ ಬಾರಾಕನ ಹೆಜ್ಜೆಹಿಡಿದು ತಟ್ಟನೆ ತಗ್ಗಿನ ಪ್ರದೇಶಕ್ಕೆ ಬಂದರು. ರೂಬೇನ್ಯರ ಗೋತ್ರದವರು ಬಹಳಷ್ಟು ತಮ್ಮ ಹೃದಯಗಳಲ್ಲಿ ವಿಶ್ಲೇಷಿಸಿದರೂ ತೀರ್ಮಾನಿಸಲಾಗಲ್ಲಿಲ್ಲ
ಅವನು ಉಳಿದ ಮನಸ್ಸೆಯವರ ಬಳಿಗೆ ದೂತರನ್ನು ಕಳುಹಿಸಲಾಗಿ ಅವರೂ ಕೂಡಿಬಂದರು. ಆಶೇರ್, ಜೆಬುಲೂನ್, ನಫ್ತಾಲಿ ಕುಲಗಳವರ ಬಳಿಗೆ ದೂತರನ್ನು ಕಳುಹಿಸಲು ಅವರೂ ಬಂದು ಯುದ್ಧಪ್ರಯಾಣಕ್ಕೋಸ್ಕರ ಸೇರಿಕೊಂಡರು.
1 ಅರಸುಗಳು 20:11
TSK
ಇಸ್ರಾಯೇಲರ ಅರಸನು ಬಂದ ದೂತರಿಗೆ, “ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು, ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೆಚ್ಚಳಪಡಬಾರದು ಎಂದು ಅವನಿಗೆ ಹೇಳಿರಿ” ಎಂದನು.