TSK

TSK · ನ್ಯಾಯಸ್ಥಾಪಕರು 4:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಮರುದಿನ ಮೋಶೆ ಜನರಿಗೆ ನ್ಯಾಯತೀರಿಸುವುದಕ್ಕಾಗಿ ಕುಳಿತಿರಲು ಮುಂಜಾನೆಯಿಂದ ಸಾಯಂಕಾಲದವರೆಗೂ ಜನರು ಅವನ ಹತ್ತಿರ ನಿಂತಿದ್ದರು.

ನನ್ನ ಮಾತನ್ನು ಕೇಳು. ನಾನು ನಿನಗೆ ಒಂದು ಆಲೋಚನೆಯನ್ನು ಹೇಳುತ್ತೇನೆ ಮತ್ತು ದೇವರು ನಿನ್ನ ಸಂಗಡ ಇರಲಿ. ನೀನು ಜನರಿಗೂ, ದೇವರಿಗೂ ಮಧ್ಯಸ್ಥನಾಗಿದ್ದು ಜನರ ವ್ಯಾಜ್ಯಗಳನ್ನು ದೇವರ ಹತ್ತಿರಕ್ಕೆ ತರಬೇಕು.

¶ ವಿಧವಿಧವಾದ ಕೊಲೆ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಅಥವಾ ಚರ್ಚೆಗಳು ನಿಮ್ಮ ಊರಿನಲ್ಲಿ ಉಂಟಾದಾಗ, ನ್ಯಾಯ ತೀರಿಸುವುದು ಕಷ್ಟವಾದರೆ, ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳಕ್ಕೆ ಹೋಗಬೇಕು.

¶ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ರಾಮಾತಯಿಮ್ ಚೋಫೀಮ್ ಊರಿನಲ್ಲಿ ಎಲ್ಕಾನನೆಂಬ ಒಬ್ಬ ಮನುಷ್ಯನಿದ್ದನು. ಇವನು ಯೆರೋಹಾಮನ ಮಗನೂ ಎಲೀಹುವಿನ ಮೊಮ್ಮಗನೂ ತೋಹುವಿನ ಮರಿಮಗನೂ ಆಗಿದ್ದನು. ತೋಹು ಎಂಬವನು ಎಫ್ರಾಯೀಮ್ಯನಾದ ಚೂಫನ ಮಗನು.

ಇದನ್ನೆಲ್ಲಾ ನೋಡಿದ ಮೇಲೆ ಫಿಲಿಷ್ಟಿಯರ ಐದು ಮಂದಿ ಪ್ರಭುಗಳು ಅದೇ ದಿನ ಎಕ್ರೋನಿಗೆ ಹಿಂದಿರುಗಿದರು.

¶ ಸಮುವೇಲನು ಮರಣಹೊಂದಿದನು. ಇಸ್ರಾಯೇಲ್ಯರೆಲ್ಲರೂ ಒಟ್ಟಾಗಿ ಬಂದು ಅವನಿಗಾಗಿ ಗೋಳಾಡುತ್ತಾ ಅವನ ಶವವನ್ನು ರಾಮದಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.

ಯೆಹೋವನು ಇಂತೆನ್ನುತ್ತಾನೆ, “ರಾಮಾದಲ್ಲಿ ಬೊಬ್ಬೆಯು ಕೇಳಿಸುತ್ತದೆ, ಗೋಳಾಟವೂ ಮತ್ತು ಘೋರ ರೋದನವೂ ಉಂಟಾಗಿವೆ; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅತ್ತತ್ತು ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದದೆ ಇದ್ದಾಳೆ.”