ತಾಬೋರ್, ಶಹಚೀಮಾ, ಬೇತ್‌ಷೆಮೆಷ್ ಎಂಬ ಊರುಗಳು ಅದರ ಮೇರೆಯೊಳಗಿದ್ದವು. ಮೇರೆಯು ಯೊರ್ದನ್ ನದಿಯ ತೀರದಲ್ಲಿ ಕೊನೆಗೊಳ್ಳುತ್ತದೆ. ಒಟ್ಟಾರೆ ಹದಿನಾರು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು,
TSK
TSK · ನ್ಯಾಯಸ್ಥಾಪಕರು 4:6
Treasury of Scripture Knowledge references in ಕನ್ನಡ IRV.
ಚಿದ್ದೀಮ್, ಚೇರ್, ಹಮ್ಮತ್, ರಕ್ಕತ್, ಕಿನ್ನೆರೆತ್,
ನಫ್ತಾಲಿ ಸ್ವತ್ತಿನಿಂದ, ಕೊಲೆ ಮಾಡಿದವನಿಗೆ ಆಶ್ರಯ ನಗರವಾದ ಗಲಿಲಾಯದ ಕೆದೆಷ್ ಹಮ್ಮೋತ್ ದೋರ್, ಕರ್ತಾನ್ ಎಂಬ ಗೋಮಾಳ ಸಹಿತವಾದ ಮೂರು ಪಟ್ಟಣಗಳು ದೊರಕಿದವು.
¶ ಆ ದಿನದಲ್ಲಿ ದೆಬೋರಳೂ ಅಬೀನೋವಮನ ಮಗನಾದ ಬಾರಾಕನೂ ಈ ಗೀತೆಯನ್ನು ಹಾಡಿದರು:
¶ ಅವನು ಜೆಬಹ, ಚಲ್ಮುನ್ನರನ್ನು, “ನೀವು ತಾಬೋರದಲ್ಲಿ ಕೊಂದುಹಾಕಿದ ಮನುಷ್ಯರು ಹೇಗಿದ್ದರು?” ಎಂದು ಕೇಳಲಾಗಿ ಅವರು ಅವನಿಗೆ, “ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು” ಎಂದು ಉತ್ತರಕೊಟ್ಟರು.
ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ಬಿಡಿಸಿ ಸುರಕ್ಷಿತವಾಗಿ ಜೀವಿಸುವಂತೆ ಮಾಡಿದನು.
ದಕ್ಷಿಣೋತ್ತರ ದಿಕ್ಕುಗಳನ್ನು ಉಂಟುಮಾಡಿದವನು ನೀನು. ತಾಬೋರ್, ಹೆರ್ಮೋನ್ ಪರ್ವತಗಳು ನಿನ್ನ ನಾಮದಲ್ಲಿ ಆನಂದಧ್ವನಿ ಮಾಡುತ್ತವೆ.
ಶತ್ರುಗಳು ಬಂದು ಪ್ರಭುಗಳ ಪುರದ್ವಾರಗಳಲ್ಲಿ ನುಗ್ಗುವಂತೆ, ಬೋಳು ಬೆಟ್ಟದ ಮೇಲೆ ಧ್ವಜವೆತ್ತಿ ಕೂಗಿರಿ, ಅವರನ್ನು ಕೈಬೀಸಿ ಕರೆಯಿರಿ.
ಯಾಜಕರೇ, ಇದನ್ನು ಕೇಳಿರಿ, ಇಸ್ರಾಯೇಲ್ ಕುಲದವರೇ, ಆಲಿಸಿರಿ; ರಾಜವಂಶದವರೇ, ಕಿವಿಗೊಡಿರಿ; ನೀವು ಮಿಚ್ಪದಲ್ಲಿ ಉರುಲಾಗಿಯೂ, ತಾಬೋರಿನಲ್ಲಿ ಬಲೆಯಾಗಿಯೂ ಇದ್ದ ಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.
¶ ಇನ್ನೂ ಏನು ಹೇಳಬೇಕು? ಗಿದ್ಯೋನ್, ಬಾರಾಕ ಸಂಸೋನ, ಯೆಪ್ತಾಹ, ದಾವೀದ, ಸಮುವೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು.