TSK

TSK · ನ್ಯಾಯಸ್ಥಾಪಕರು 4:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಹಾಚೋರಿನ ಅರಸನಾದ ಯಾಬೀನನಿಗೂ ಕೇನ್ಯನಾದ ಹೆಬೆರನ ಮನೆಯವರಿಗೂ ಸಮಾಧಾನವಿದ್ದುದರಿಂದ ಸೀಸೆರನು ಕಾಲುನಡಿಗೆಯಿಂದ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳ ಗುಡಾರದ ಕಡೆಗೆ ಹೋದನು.

ಒಬ್ಬ ಸ್ತ್ರೀಯು ಮೇಲಿನಿಂದ ಒಂದು ಬೀಸುವ ಕಲ್ಲನ್ನು ಬೀಳಿಸಿ, ಅವನ ತಲೆಬುರುಡೆಯನ್ನು ಒಡೆದುಬಿಟ್ಟಳು.

ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.

ಅರಸನ ಎದುರಿಗೆ ನಿಂತು ಅವನಿಗೆ, “ಉಜ್ಜೀಯನೇ, ಯೆಹೋವನಿಗೋಸ್ಕರ ಧೂಪ ಹಾಕುವುದು ನಿನ್ನ ಕೆಲಸವಲ್ಲ; ಅದಕ್ಕೋಸ್ಕರ ಆರೋನನ ಸಂತಾನದವರಾದ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟುಹೋಗು; ನೀನು ಮಾಡುತ್ತಿರುವುದು ದ್ರೋಹ. ಇದಕ್ಕೆ ದೇವರಾದ ಯೆಹೋವನಿಂದ ನಿನಗೆ ಗೌರವ ದೊರಕಲಾರದು” ಎಂದರು.