¶ ಆದರೆ ಮೋಶೆ ಆ ಜನರಿಗೆ, “ನೀವು ಅಂಜಬೇಡಿರಿ. ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವುದಿಲ್ಲ.
TSK
TSK · ನ್ಯಾಯಸ್ಥಾಪಕರು 7:21
Treasury of Scripture Knowledge references in ಕನ್ನಡ IRV.
ಅವರಲ್ಲಿ ಪ್ರತಿಯೊಬ್ಬನೂ ತನ್ನ ಎದುರಿಗೆ ಬಂದ ವಿರೋಧಿಯನ್ನು ಕೊಲ್ಲುತ್ತಾ ಮುಂದುವರಿದರು. ಅರಾಮ್ಯರು ಓಡಿಹೋಗಲು ಇಸ್ರಾಯೇಲರು ಅವರನ್ನು ಹಿಂದಟ್ಟಿದರು. ಅವರ ಅರಸನಾದ ಬೆನ್ಹದದನೂ ಹಾಗು ಕೆಲವು ಸವಾರರೂ ಕುದುರೆಗಳನ್ನೇರಿ ಓಡಿಹೋಗಿ ತಪ್ಪಿಸಿಕೊಂಡರು.
ತಮ್ಮ ಗುಡಾರಗಳನ್ನೂ, ಕತ್ತೆ ಕುದುರೆಗಳನ್ನೂ ಪಾಳೆಯದಲ್ಲಿದ್ದುದ್ದೆಲ್ಲವನ್ನೂ ಬಿಟ್ಟು ತಮ್ಮ ಜೀವರಕ್ಷಣೆಗಾಗಿ ಅದೇ ಸಾಯಂಕಾಲದಲ್ಲಿ ಓಡಿಹೋಗಿದ್ದರು.
ಈ ಸಮೂಹದೊಂದಿಗೆ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಯೆರೂಸಲೇಮಿನವರೇ, ಸುಮ್ಮನೆ ನಿಂತುಕೊಂಡು ಯೆಹೋವನು ನಿಮಗೋಸ್ಕರ ಮಾಡುವ ರಕ್ಷಣಾ ಕಾರ್ಯವನ್ನು ನೋಡಿರಿ; ಹೆದರಬೇಡಿರಿ, ಕಳವಳಗೊಳ್ಳಬೇಡಿರಿ. ನಾಳೆ ಅವರೆದುರಿಗೆ ಹೊರಡಿರಿ, ಯೆಹೋವನು ನಿಮ್ಮ ಸಂಗಡ ಇರುವನು” ಎಂದು ಹೇಳಿದನು.
ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು, ಶಿಷ್ಟನು ಸಿಂಹದಂತೆ ಧೈರ್ಯದಿಂದಿರುವನು.
ಇಸ್ರಾಯೇಲರ ಸದಮಲಸ್ವಾಮಿಯಾಗಿರುವ ಕರ್ತನಾದ ಯೆಹೋವನು, “ನೀವು ಪರಿವರ್ತನೆಗೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವುದು; ಶಾಂತರಾಗಿ ಭರವಸದಿಂದಿರುವುದೇ ನಿಮಗೆ ಬಲ ಎಂದು ಹೇಳಿದ್ದರೂ, ನೀವು ಒಪ್ಪಿಕೊಂಡಿಲ್ಲ.