ಇದಲ್ಲದೆ ಅವರು ಮಿದ್ಯಾನ್ಯರ ನಾಯಕರಾದ ಓರೇಬ್, ಜೇಬ್ ಎಂಬುವರನ್ನು ಹಿಡಿದು ಓರೇಬನನ್ನು, ಓರೇಬನ ಬಂಡೆಯ ಮೇಲೆಯೂ, ಜೇಬನನ್ನು ಜೇಬನ ದ್ರಾಕ್ಷಿಯ ಆಲೆಯಲ್ಲಿಯೂ ಕೊಂದು ಅವರ ತಲೆಗಳನ್ನು ತೆಗೆದುಕೊಂಡು ಮಿದ್ಯಾನ್ಯರನ್ನು ಹಿಂದಟ್ಟುತ್ತಾ ಯೊರ್ದನಿನ ಆಚೆಗೆ ಹೋಗಿ ಅಲ್ಲಿದ್ದ ಗಿದ್ಯೋನನಿಗೆ ಅವುಗಳನ್ನು ಒಪ್ಪಿಸಿದರು.
TSK
TSK · ನ್ಯಾಯಸ್ಥಾಪಕರು 8:3
Treasury of Scripture Knowledge references in ಕನ್ನಡ IRV.
ಕೀರ್ತನೆಗಳು 115:1
TSK
ನಮ್ಮನ್ನಲ್ಲ, ಯೆಹೋವನೇ, ನಮ್ಮನ್ನಲ್ಲ, ನಿನ್ನ ಪ್ರೀತಿ, ಸತ್ಯತೆಗಳ ನಿಮಿತ್ತವಾಗಿ ನಿನ್ನ ಹೆಸರನ್ನೇ ಘನಪಡಿಸು.
ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು.
ಸಮಯೋಚಿತವಾದ ಮಾತುಗಳು ಬೆಳ್ಳಿಯ ಕಟ್ಟಿನಲ್ಲಿ ಖಚಿತವಾದ ಬಂಗಾರದ ಹಣ್ಣುಗಳಿಗೆ ಸಮಾನ.
ಯೋಹಾನನು 4:37
TSK
‹‘ಬಿತ್ತುವವನೊಬ್ಬನು, ಕೊಯ್ಯುವವನು ಬೇರೊಬ್ಬನು’ ಎಂದು ಹೇಳುವ ಮಾತು ಇದರಲ್ಲಿ ಸತ್ಯವಾಗಿದೆ.›
ದೇವರು ನಮಗೆ ಕೃಪೆಮಾಡಿದ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ಹೊಂದಿದ ವರವು ಪ್ರವಾದನೆ ರೂಪವಾಗಿದ್ದರೆ, ನಮ್ಮ ನಂಬಿಕೆಗೆ ತಕ್ಕ ಹಾಗೆ ಪ್ರವಾದನೆ ಹೇಳೋಣ.
ಸ್ವಾರ್ಥದಿಂದಾಗಲಿ, ಒಣ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ, ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.