TSK

TSK · ನ್ಯಾಯಸ್ಥಾಪಕರು 8:30

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.

¶ ಯಾಕೋಬನ ಸೊಸೆಯರಲ್ಲದೆ ಯಾಕೋಬನಿಂದಲೇ ಹುಟ್ಟಿ ಅವನೊಂದಿಗೆ ಐಗುಪ್ತ ದೇಶಕ್ಕೆ ಹೋದವರು ಒಟ್ಟು ಅರವತ್ತಾರು ಮಂದಿ.

ಅವನು ಅನೇಕ ಸ್ತ್ರೀಯರನ್ನು ಮದುವೆ ಮಾಡಿಕೊಳ್ಳಬಾರದು; ಮಾಡಿಕೊಂಡರೆ ಅವನ ಮನಸ್ಸು ಯೆಹೋವನ ಕಡೆಯಿಂದ ತಿರುಗುವುದಕ್ಕೆ ಅವಕಾಶವಾಗುವುದು. ಅವನು ಹೆಚ್ಚು ಬೆಳ್ಳಿಬಂಗಾರವನ್ನು ಕೂಡಿಸಿಟ್ಟುಕೊಳ್ಳಬಾರದು.

“ನೀವು ದಯವಿಟ್ಟು ಶೆಕೆಮಿನ ಹಿರಿಯರನ್ನು ಮಾತನಾಡಿಸಿ, ‘ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳ್ವಿಕೆ ಮಾಡುವುದು ಒಳ್ಳೆಯದೋ ಅಥವಾ ಒಬ್ಬನೇ ಆಳುವುದು ಮೇಲೋ?’ ಎಂದು ಅವರನ್ನು ಕೇಳಿ, ನಾನು ಅವರ ರಕ್ತಸಂಬಂಧಿಯಾಗಿದ್ದೇನೆ ಎಂಬುದನ್ನು ತಿಳಿಸಿರಿ” ಅಂದನು.

ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರಿ ಕತ್ತೆಗಳೂ, ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನ ವರೆಗೂ ಯಾಯೀರನ ಗ್ರಾಮಗಳೆಂದು ಹೆಸರಿದೆ.

ಇವನಿಗೆ ನಲ್ವತ್ತು ಮಂದಿ ಮಕ್ಕಳೂ, ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಇವರೆಲ್ಲರಿಗೆ ಸವಾರಿಮಾಡುವುದಕ್ಕೋಸ್ಕರ ಎಪ್ಪತ್ತು ಕತ್ತೆಗಳಿದ್ದವು. ಪಿರಾತೋನಿನವನೂ ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಾಯೇಲರನ್ನು ಎಂಟು ವರ್ಷಗಳ ಕಾಲ ಪಾಲಿಸಿದ ನಂತರ ಮರಣಹೊಂದಿದನು;

ದಾವೀದನು ಹೆಬ್ರೋನಿನಿಂದ ಯೆರೂಸಲೇಮಿಗೆ ಬಂದ ಮೇಲೆ ಅಲ್ಲಿಯೂ ಅನೇಕ ಸ್ತ್ರೀಯರನ್ನು ಪತ್ನಿಯರನ್ನಾಗಿಯೂ ಮತ್ತು ಉಪಪತ್ನಿಯರನ್ನಾಗಿಯೂ ಮಾಡಿಕೊಂಡಿದ್ದರಿಂದ ಅವನಿಗೆ ಇನ್ನೂ ಕೆಲವು ಮಂದಿ ಗಂಡು ಹೆಣ್ಣು ಮಕ್ಕಳು ಹುಟ್ಟಿದರು.

¶ ಆಗ ಸಮಾರ್ಯ ಪಟ್ಟಣದಲ್ಲಿ ಅಹಾಬನ ಸಂತಾನದ ಎಪ್ಪತ್ತು ಮಂದಿ ರಾಜಪುತ್ರರಿದ್ದರು. ಯೇಹುವು ಆ ಪಟ್ಟಣದಲ್ಲಿದ್ದ ಇಜ್ರೇಲಿನ ಅಧಿಕಾರಿಗಳಾದ ಹಿರಿಯರಿಗೂ, ಅಧಿಕಾರಿಗಳಿಗೂ ರಾಜ್ಯಪಾಲಕರಿಗೂ ಪತ್ರಗಳನ್ನು ಬರೆದು ಅವುಗಳನ್ನು ದೂತರ ಮುಖಾಂತರವಾಗಿ ಕಳುಹಿಸಿದನು.

‹‘ಈ ಕಾರಣದಿಂದಲೇ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು ಎಂದು ನೀವು ಓದಲಿಲ್ಲವೋ?’›