ಯಾಕೆಂದರೆ ನೀವು ಐಗುಪ್ತದೇಶದಿಂದ ಬಂದಾಗ ಅಮ್ಮೋನಿಯರು ಅನ್ನಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; ಮೋವಾಬ್ಯರು ನಿಮ್ಮನ್ನು ಶಪಿಸುವುದಕ್ಕಾಗಿ ಬೆಯೋರನ ಮಗನಾದ ಬಿಳಾಮನಿಗೆ ಹಣಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮಿನ ಪೆತೋರ್ ಊರಿನಿಂದ ಅವನನ್ನು ಕರೆಯಿಸಿದರು.
TSK
TSK · ಪ್ರಲಾಪಗಳು 1:10
Treasury of Scripture Knowledge references in ಕನ್ನಡ IRV.
¶ ಅಂದು ಜನರ ಮುಂದೆ ಮೋಶೆಯ ಧರ್ಮನಿಯಮಗಳ ಪಾರಾಯಣವು ನಡೆಯುತ್ತಿರಲಾಗಿ, ಅದರಲ್ಲಿ ಅಮ್ಮೋನಿಯರಾಗಲಿ ಹಾಗು ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಪ್ರವೇಶಮಾಡಬಾರದು.
ದೇವರೇ, ಮ್ಲೇಚ್ಛರು ನಿನ್ನ ಸ್ವತ್ತನ್ನು ಹೊಕ್ಕು, ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು; ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳನ್ನಾಗಿ ಮಾಡಿಬಿಟ್ಟರು.
ನಿನ್ನ ಸ್ವಕೀಯಜನರು ಸ್ವಲ್ಪಕಾಲ ಮಾತ್ರ ನಿನ್ನ ಸ್ವತ್ತಾದ ಪವಿತ್ರಸ್ಥಳವನ್ನು ಅನುಭವಿಸುತ್ತಿದ್ದರು; ಈಗ ನಮ್ಮ ವೈರಿಗಳು ಅದನ್ನು ತುಳಿದುಬಿಟ್ಟಿದ್ದಾರೆ.
“ನಿನ್ನ ಸಕಲ ಪ್ರಾಂತ್ಯಗಳಲ್ಲಿ ನೀನು ಮಾಡಿದ ಎಲ್ಲಾ ಪಾಪಗಳ ನಿಮಿತ್ತ ನಾನು ನಿನ್ನ ಸೊತ್ತು ಮತ್ತು ಸಂಪತ್ತುಗಳನ್ನು ಲಾಭವಿಲ್ಲದೆ ಸೂರೆಗೆ ಈಡುಮಾಡಿ,
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಸಮಸ್ತ ಪ್ರಧಾನರನ್ನೂ ಯೆರೂಸಲೇಮಿನ ಸಮಸ್ತ ಪ್ರಧಾನರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಾಗ ಕೆಲವು ಉಪಕರಣಗಳನ್ನು ತೆಗೆದುಕೊಳ್ಳಲಿಲ್ಲವಲ್ಲಾ.
ನಾವು ನಿಂದೆಯನ್ನು ಕೇಳಿ ನಾಚಿಕೆಗೊಂಡೆವು, ‘ಯೆಹೋವನ ಆಲಯದ ಪವಿತ್ರಸ್ಥಾನಗಳನ್ನು ಮ್ಲೇಚ್ಛರು ಪ್ರವೇಶಿಸಿದ್ದರಿಂದ ಅವಮಾನವು ನಮ್ಮ ಮುಖವನ್ನು ಮುಚ್ಚಿಕೊಂಡಿದೆ’ ಎಂಬುದಾಗಿ ಅಂದುಕೊಳ್ಳುತ್ತಿರೋ?
ಕಸ್ದೀಯರು ಯೆಹೋವನ ಆಲಯದ ಬಳಿಯಲ್ಲಿದ್ದ ತಾಮ್ರದ ಕಂಬಗಳನ್ನೂ, ಪೀಠಗಳನ್ನೂ, ಸಮುದ್ರವೆನಿಸಿಕೊಂಡ ಪಾತ್ರೆಯನ್ನೂ ಒಡೆದು,
ನಾನು ಅವರ ಕಡೆಯಿಂದ ನನ್ನ ಮುಖವನ್ನು ತಿರುಗಿಸಲು, ನನ್ನ ಪ್ರಿಯ ಮಂದಿರವನ್ನು ಹೊಲೆಗೆಡಿಸುವರು; ಕಳ್ಳರು ಅದರಲ್ಲಿ ನುಗ್ಗಿ ಅದನ್ನು ಹೊಲಸುಮಾಡುವರು.
‘ಇಸ್ರಾಯೇಲ್ ವಂಶದವರೇ, ನೀವು ನನ್ನ ರೊಟ್ಟಿಯನ್ನೂ, ಕೊಬ್ಬನ್ನೂ, ರಕ್ತವನ್ನೂ ಅರ್ಪಿಸುವಾಗ, ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನರಾದ ಮ್ಲೇಚ್ಛರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ, ನನ್ನ ಮಂದಿರವನ್ನು ಅಪವಿತ್ರಗೊಳಿಸಿ, ನನ್ನ ಒಡಂಬಡಿಕೆಯನ್ನು ಭಂಗಪಡಿಸಿ, ನಿಮ್ಮ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.