ಆದರೂ ನನಗೆ ಆಪತ್ತು ಬಂದಾಗ, ಅವರು ಸಂತೋಷಿಸುತ್ತಾ ಕೂಡಿಕೊಂಡರು; ನಿರಾಕಾರಣವಾಗಿ ಈ ಭ್ರಷ್ಟರು ನನಗೆ ವಿರುದ್ಧವಾಗಿ ಕೂಡಿ ಕೊಂಡಾಡಿದರು, ಸೂರೆ ಮಾಡುವುದನ್ನು ಬಿಡಲೇ ಇಲ್ಲ.
TSK
TSK · ಪ್ರಲಾಪಗಳು 1:21
Treasury of Scripture Knowledge references in ಕನ್ನಡ IRV.
“ನನ್ನ ವಿಷಯದಲ್ಲಿ ಶತ್ರುಗಳಿಗೆ ಸಂತೋಷವಾಗಬಾರದು; ನಾನು ಜಾರಿಬಿದ್ದರೆ ಹಿಗ್ಗಬಾರದು” ಅಂದುಕೊಂಡೆನು.
¶ ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡು ಬಂದ ದೈವೋಕ್ತಿ.
ನಿನ್ನ ಕರ್ತನೂ, ತನ್ನ ಜನರ ಪಕ್ಷವಾಗಿ ವ್ಯಾಜ್ಯವಾಡುವ ನಿನ್ನ ದೇವರೂ ಆದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ಭ್ರಮಣಗೊಳಿಸುವ ಪಾನದ ಪಾತ್ರೆಯನ್ನು ಅಂದರೆ, ನನ್ನ ರೋಷದಿಂದ ತುಂಬಿರುವ ಬಟ್ಟಲನ್ನು ನಿನ್ನ ಕೈಯೊಳಗಿಂದ ತೆಗೆದುಹಾಕುವೆನು. ಅದನ್ನು ನೀನು ತಿರುಗಿ ಕುಡಿಯುವುದೇ ಇಲ್ಲ.
ಹೀಗಿರಲು ನಿನ್ನನ್ನು ನುಂಗುವವರೆಲ್ಲರು ನುಂಗಲ್ಪಡುವರು; ನಿನ್ನ ಶತ್ರುಗಳಲ್ಲಿ ಒಬ್ಬನೂ ತಪ್ಪದೆ ಸೆರೆಗೆ ಹೋಗುವರು. ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು, ನಿನ್ನನ್ನು ಕೊಳ್ಳೆ ಹೊಡೆಯುವವರನ್ನು ಕೊಳ್ಳೆಗೆ ಈಡುಮಾಡುವೆನು.”
ಇಸ್ರಾಯೇಲೇ ನಿನಗೆ ಗೇಲಿಯಾಯಿತಷ್ಟೆ. ಅದು ಕಳ್ಳರ ಗುಂಪಿನಲ್ಲಿ ಸೇರಿದ್ದಾಗಿ ಹಿಡಿಯಲ್ಪಟ್ಟಿತೋ? ನೀನು ಇಸ್ರಾಯೇಲಿನ ಪ್ರಸ್ತಾಪ ಎತ್ತುವಾಗೆಲ್ಲಾ ತಲೆಯಾಡಿಸುತ್ತೀಯಲ್ಲವೆ?
ಅದರ ಸುತ್ತಲು ಜಯಘೋಷಮಾಡಿರಿ, ಅಧೀನವಾಯಿತು, ಅದರ ಕೊತ್ತಲುಗಳು ಬಿದ್ದವು, ಅದರ ಪೌಳಿಗೋಡೆಯು ಕೆಡವಲ್ಪಟ್ಟಿತು. ಯೆಹೋವನು ಅದಕ್ಕೆ ಮುಯ್ಯಿತೀರಿಸಿದ್ದಾನೆ; ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ.
ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ, “ಆಹಾ, ಸೊಕ್ಕಿನ ರಾಜ್ಯವೇ! ನಾನು ನಿನ್ನ ವಿರುದ್ಧವಾಗಿದ್ದೇನೆ; ನಿನಗೆ ಹೊತ್ತು ಬಂದಿದೆ, ನಿನ್ನನ್ನು ದಂಡಿಸತಕ್ಕ ಕಾಲ ಸಂಭವಿಸಿದೆ.
“ಹತರಾದ ಇಸ್ರಾಯೇಲರೇ, ಬಾಬೆಲಿನ ಹಿತಕ್ಕಾಗಿ ಲೋಕದಲ್ಲೆಲ್ಲಾ ಬಹು ಜನರು ಹೇಗೆ ಹತರಾದರೋ, ಹಾಗೆಯೇ ಬಾಬೆಲೂ ಹತವಾಗುವುದು.
ಯಾರೂ ಮಹೋತ್ಸವಗಳಿಗೆ ಬಾರದೆ ಇರುವುದರಿಂದ ಚೀಯೋನಿಗೆ ಹೋಗುವ ದಾರಿಗಳು ಬಿಕೋ ಎನ್ನುತ್ತಿವೆ; ಅದರ ಬಾಗಿಲುಗಳೆಲ್ಲಾ ಹಾಳು ಬಿದ್ದಿವೆ, ಅಲ್ಲಿನ ಯಾಜಕರು ನರಳಾಡುತ್ತಾರೆ; ಅಲ್ಲಿನ ಕನ್ಯೆಯರು ವ್ಯಥೆಪಡುತ್ತಾರೆ, ನಗರಿಗೆ ನಗರಿಯೇ ಶೋಕದಿಂದ ತುಂಬಿದೆ.
ಆಕೆಯ ಜನರೆಲ್ಲಾ ನರಳುತ್ತಾರೆ, ಅವರು ಅನ್ನವನ್ನು ಹುಡುಕಿಕೊಳ್ಳುವ ಗತಿ ಬಂತು, ಪ್ರಾಣಾಧಾರವಾದ ಆಹಾರಕ್ಕಾಗಿ ತಮ್ಮ ಅಮೂಲ್ಯ ವಸ್ತುಗಳನ್ನೂ ಕೊಟ್ಟುಬಿಟ್ಟಿದ್ದಾರೆ, “ಯೆಹೋವನೇ, ನೋಡು, ಕಟಾಕ್ಷಿಸು, ನಾನು ತುಚ್ಛಳಾದೆನಲ್ಲಾ” ಎಂದು ಪ್ರಲಾಪಿಸುತ್ತಾಳೆ.
ಅವರು ಮಾಡಿದ ಕೆಡುಕೆಲ್ಲಾ ನಿನ್ನ ಚಿತ್ತಕ್ಕೆ ಮುಟ್ಟಲಿ; ನೀನು ನನ್ನ ಎಲ್ಲಾ ದ್ರೋಹಗಳಿಗೆ ಪ್ರತಿಯಾಗಿ ನನಗೆ ಮಾಡಿದಂತೆ ಅವರಿಗೂ ಮಾಡು; ನನ್ನ ನರಳಾಟವು ಬಹಳವಾಗಿದೆ, ನನ್ನ ಎದೆಯು ಕುಂದಿಹೋಗಿದೆ.
ನಿನ್ನ ಶತ್ರುಗಳೆಲ್ಲಾ ನಿನ್ನನ್ನು ನೋಡಿ ಬಾಯಿ ವ್ಯಂಗ್ಯವಾದ ನಗುವಿನಿಂದ ಟೀಕಿಸುತ್ತಾರೆ, ಛೀಗುಟ್ಟಿ, ಹಲ್ಲು ಕಡಿಯುತ್ತಾರೆ; ಆಹಾ, ಆಕೆಯನ್ನು ನುಂಗಿಬಿಟ್ಟಿದ್ದೇವೆ, ನಾವು ನಿರೀಕ್ಷಿಸುತ್ತಿದ್ದ ದಿನವು ಇದೇ, ಈಗ ಬಂದೊದಗಿತು, ಅದನ್ನು ಕಣ್ಣಾರೆ ಕಂಡೆವು ಅಂದುಕೊಳ್ಳುತ್ತಾರೆ.
¶ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
ಆಹಾ ತೀರ್ಪಿನ ತಗ್ಗಿನಲ್ಲಿ ಗುಂಪುಗುಂಪುಗಳಾಗಿ ಜನರಿದ್ದಾರೆ. ಏಕೆಂದರೆ ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿದೆ.
¶ ನಿನ್ನ ತಮ್ಮನ ದುರ್ದಿನದಲ್ಲಿ ಅವನ ಅಪಾಯಕಾಲದಲ್ಲಿ ನೀನು ಸುಮ್ಮನೆ ನೋಡುತ್ತಿರಬಾರದಾಗಿತ್ತು. ಯೆಹೂದ್ಯರ ನಾಶನದ ದಿನದಲ್ಲಿ ಹಿಗ್ಗಬಾರದಾಗಿತ್ತು. ಅವರ ಇಕ್ಕಟ್ಟಿನ ವೇಳೆಯಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು.
‘ನಿನ್ನ ರೋಷವನ್ನು ಪಾನಕಕ್ಕೆ ಬೆರಸಿ ನಿನ್ನ ನೆರೆಯವನಿಗೆ ಕುಡಿಸಿ, ಅವನ ಬೆತ್ತಲೆತನವನ್ನು ನೋಡಬೇಕೆಂದು ಅವರನ್ನು ಅಮಲೇರಿಸಿದವನೇ, ನಿನ್ನ ಗತಿಯನ್ನು ಏನು ಹೇಳಲಿ!