ಬೇರೆ ಯಾವ ದೇವರೂ ಮನಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ, ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವುದಕ್ಕೆ ಪ್ರಯತ್ನಿಸಿದ್ದಾನೇ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣು ಮುಂದೆ ನಡಿಸಿದ್ದಾನಲ್ಲಾ.
TSK
TSK · ಪ್ರಲಾಪಗಳು 1:7
Treasury of Scripture Knowledge references in ಕನ್ನಡ IRV.
“ಅಯ್ಯೋ ನಾನು ಹಿಂದಿನ ತಿಂಗಳುಗಳಲ್ಲಿ ಇದ್ದಂತೆ ಈಗಲೂ ಇದ್ದರೆ ಎಷ್ಟೋ ಸಂತೋಷವಾಗಿತ್ತು! ಆ ದಿನಗಳಲ್ಲಿ ದೇವರು ನನ್ನನ್ನು ಕಾಯುತ್ತಿದ್ದನಲ್ಲಾ!
ನಾನು ವ್ಯಥೆಪಡುತ್ತಾ ದೇವರನ್ನು ಸ್ಮರಿಸುವೆನು; ಮನಗುಂದಿದವನಾಗಿಯೇ ಹಂಬಲಿಸುವೆನು.
ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು; ಸುತ್ತಣ ಜನರ ಪರಿಹಾಸ್ಯ ಮತ್ತು ತಿರಸ್ಕಾರಕ್ಕೆ ಗುರಿಯಾದೆವು.
ಆತನು ತನ್ನ ವಾಕ್ಯವನ್ನು ಯಾಕೋಬ್ಯರಿಗೆ ತಿಳಿಸುತ್ತಾನೆ, ತನ್ನ ನಿಯಮವಿಧಿಗಳನ್ನು ಇಸ್ರಾಯೇಲರಿಗೆ ಪ್ರಕಟಿಸುತ್ತಾನೆ.
ನಿನ್ನ ಪರಿಶುದ್ಧ ಪಟ್ಟಣಗಳು ಕಾಡಾಗಿವೆ, ಚೀಯೋನು ಬೀಡಾಗಿದೆ, ಯೆರೂಸಲೇಮು ಹಾಳಾಗಿ ಹೋಗಿದೆ.
ಹಾದುಹೋಗುವವರೆಲ್ಲರೂ ನಿನ್ನನ್ನು ನೋಡಿ ಚಪ್ಪಾಳೆಹೊಡೆಯುತ್ತಾರೆ, ಯೆರೂಸಲೇಮ್ ನಗರಿಯನ್ನು ಕಂಡು, “ಆಹಾ, ಪರಿಪೂರ್ಣಸುಂದರಿ, ಸಮಸ್ತಲೋಕ ಸಂತೋಷಿಣಿ ಎನ್ನಿಸಿಕೊಳ್ಳುತ್ತಿದ್ದ ಪುರಿಯು ಇದೇ ಏನು? ಛೀ ಛೀ” ಎಂದು ತಲೆಯಾಡಿಸುತ್ತಾರೆ.
‘ಕರ್ತನಾದ ಯೆಹೋವನ ಮಾತನ್ನು ಕೇಳು’ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಮ್ಮೋನೇ, ನನ್ನ ಪವಿತ್ರಾಲಯವು ಅಪವಿತ್ರವಾದದ್ದನ್ನು, ಇಸ್ರಾಯೇಲ್ ದೇಶವು ಹಾಳುಬಿದ್ದದನ್ನು, ಯೆಹೂದ ವಂಶದವರು ಸೆರೆಹೋದದ್ದನ್ನು ನೀನು ನೋಡಿ, “ಅಹಾ!” ಎಂದು ಹಿಗ್ಗಿಕೊಂಡೆ.
ಅವಳು ತನ್ನೊಂದಿಗೆ ವ್ಯಭಿಚಾರ ಮಾಡಿದವರನ್ನು ಅನುಸರಿಸಿ ಹೋದರೂ ಅವರು ಸಿಕ್ಕುವುದಿಲ್ಲ. ಆಗ ಅವಳು, “‘ನಾನು ಮದುವೆಯಾದ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು, ಈಗಿನ ನನ್ನ ಸ್ಥಿತಿಗಿಂತ ಆಗಿನ ಸ್ಥಿತಿಯು ಎಷ್ಟೋ ಲೇಸು’ ಅಂದುಕೊಳ್ಳುವಳು.
‹ಆಗ ಅವನಿಗೆ ಬುದ್ಧಿಬಂದು ಅವನು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ.›