ನೀನು ದೇಶವನ್ನು ಕಂಪನಗೊಳಿಸಿ ಒಡೆದುಬಿಟ್ಟಿದ್ದೀ; ಅದು ನಡುಗುತ್ತಿರುವುದಲ್ಲಾ. ಅದರ ಒಡಕುಗಳನ್ನು ಸರಿಮಾಡು;
TSK
TSK · ಪ್ರಲಾಪಗಳು 2:13
Treasury of Scripture Knowledge references in ಕನ್ನಡ IRV.
ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ?
ನೀನು ಅವರಿಗೆ, “ನನ್ನ ಕಣ್ಣೀರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು.
ಯೆಹೋವನು ಇಂತೆನ್ನುತ್ತಾನೆ, “ನಿನ್ನ ಗಾಯವು ಗುಣಹೊಂದುವುದಿಲ್ಲ, ನಿನ್ನ ಬಾಸುಂಡೆಯು ಘೋರವಾಗಿದೆ.
ಅಯ್ಯೋ, ನೋವು ನಿಲ್ಲದು ಎಂದು ನಿನ್ನ ಪೆಟ್ಟಿಗಾಗಿ ಏಕೆ ಅರಚಿಕೊಳ್ಳುತ್ತೀ? ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದುದರಿಂದ ನಿನಗೆ ಇದನ್ನೆಲ್ಲಾ ಮಾಡಿದೆನು.
ಹಾದುಹೋಗುವವರೇ, ನಿಮ್ಮಲ್ಲಿ ಯಾರಿಗೂ ನನ್ನ ಚಿಂತೆ ಇಲ್ಲವೋ? ಯೆಹೋವನು ಅತಿ ರೋಷಗೊಂಡು ನನ್ನನ್ನು ಬಾಧಿಸಿ ನನಗೆ ಉಂಟುಮಾಡಿದ ವ್ಯಥೆಯನ್ನು ನೀವು ನೋಡಿ ಇಂಥಾ ವ್ಯಥೆಯು ಇನ್ನೆಲ್ಲಾದರೂ ಉಂಟೋ ಯೋಚಿಸಿರಿ.
ಫರೋಹನು ಇವರೆಲ್ಲರನ್ನೂ ನೋಡಿ ತನ್ನ ಸಮಸ್ತ ಪ್ರಜೆಯ ವಿಷಯದಲ್ಲಿ ಸಮಾಧಾನ ಹೊಂದುವನು; ಹೌದು, ಫರೋಹನೂ ಮತ್ತು ಖಡ್ಗದಿಂದ ಹತರಾದ ಅವನ ಸಕಲ ಸೈನಿಕರೂ ಸಮಾಧಾನ ಹೊಂದುವರು” ಇದು ಕರ್ತನಾದ ಯೆಹೋವನ ನುಡಿ.