ಆತನ ಸಿಟ್ಟು ನನ್ನನ್ನು ಸೀಳಿ ಹಿಂಸಿಸುತ್ತಿದೆ; ಆತನು ನನ್ನ ಮೇಲೆ ಹಲ್ಲು ಕಡಿದಿದ್ದಾನೆ, ಆತನು ನನ್ನ ಮೇಲೆ ದೃಷ್ಟಿಯನ್ನು ತೀಕ್ಷ್ಣ ಮಾಡಿದ್ದಾನೆ.
TSK
TSK · ಪ್ರಲಾಪಗಳು 2:16
Treasury of Scripture Knowledge references in ಕನ್ನಡ IRV.
ಆಹಾರಕ್ಕೋಸ್ಕರ ಪರಿಹಾಸ್ಯಮಾಡುವ ಮೂರ್ಖರ ಸಂಗಡ, ನನ್ನ ಮೇಲೆ ಹಲ್ಲುಕಡಿಯುತ್ತಾರೆ.
ಆಹಾ, ನಮ್ಮ ಆಶೆ ನೆರವೇರಿತು ಅಂದುಕೊಳ್ಳುವುದಕ್ಕೆ ಅವರಿಗೆ ಅವಕಾಶವಿರಬಾರದು; ಅವನನ್ನು ಸಂಪೂರ್ಣವಾಗಿ ನಾಶಮಾಡಿಬಿಟ್ಟಿದ್ದೇವೆಂದು ಅವರು ಕೊಚ್ಚಿಕೊಳ್ಳಬಾರದು.
“ಅವನನ್ನು ಅಸಾಧ್ಯರೋಗ ಹಿಡಿದಿದೆ; ಅವನು ಹಾಸಿಗೆಯನ್ನು ಬಿಟ್ಟು ತಿರುಗಿ ಏಳುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ.
ಆತನು ಪರಲೋಕದಿಂದ ಆಲಿಸಿ, ನಿಂದಕರ ಮಾತಿನಿಂದ ನನ್ನನ್ನು ತಪ್ಪಿಸುವನು; ಸೆಲಾ ತನ್ನ ಪ್ರೀತಿಯನ್ನು ಮತ್ತು ಸತ್ಯತೆಯನ್ನೂ ತೋರ್ಪಡಿಸುವನು.
ದುಷ್ಟನು ನೋಡಿ ವ್ಯಥೆಪಡುವನು; ಅವನು ಹಲ್ಲುಕಡಿಯುತ್ತಾ ನಾಶವಾಗುವನು. ದುಷ್ಟರ ನಿರೀಕ್ಷೆಯು ಭಂಗವಾಗುವುದು.
ನಿನ್ನ ಹಾಳು ಪ್ರದೇಶಗಳು, ನಿನ್ನ ಬೀಳು ಭೂಮಿಯು, ಕೆಟ್ಟುಹೋದ ನಿನ್ನ ಸೀಮೆಯು ಇವುಗಳಿಗೆ ಏನಾಗುವುದೆಂದು ನೋಡುವಿ. ನಿನ್ನನ್ನು ನುಂಗಿದವರು ದೂರವಾಗುವರು, ನಿನ್ನ ನಿವಾಸಿಗಳಿಗೆ ನೀನು ಸಂಕೋಚಸ್ಥಳವಾಗುವಿ.
ಕಂಡಕಂಡವರೆಲ್ಲರೂ ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ವಿರೋಧಿಗಳು, ‘ನಾವು ಅವರನ್ನು ನುಂಗಿದ್ದು ದೋಷವಲ್ಲ, ಅವರು ಸತ್ಯಸ್ವರೂಪನಾದ ಯೆಹೋವನಿಗೆ, ಹೌದು, ತಮ್ಮ ಪೂರ್ವಿಕರ ನಿರೀಕ್ಷೆಯಾದ ಯೆಹೋವನಿಗೆ ಪಾಪ ಮಾಡಿದರಲ್ಲಾ’ ಅಂದುಕೊಂಡರು.
ಯೆಹೂದವು ಹೀಗೆ ಪ್ರಲಾಪಿಸುತ್ತದೆ, ‘ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದುಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರಿಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು ಗಂಗಾಳದಂತೆ ತೊಳೆದುಬಿಟ್ಟಿದ್ದಾನೆ.
ನಮ್ಮ ಶತ್ರುಗಳೆಲ್ಲಾ ನಮ್ಮನ್ನು ನೋಡಿ ಹಾಸ್ಯಮಾಡುತ್ತಾರೆ.
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಉದ್ದವೂ, ಅಗಲವೂ, ಬಹಳ ತುಂಬುವ, ನಿನ್ನ ಅಕ್ಕನ ಪಾತ್ರೆಯಲ್ಲಿ ನೀನು ಕುಡಿದು, ಹಾಸ್ಯಕ್ಕೂ, ಕುಚೋದ್ಯಕ್ಕೂ ಗುರಿಯಾಗುವಿ.
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಚಪ್ಪಾಳೆ ಹೊಡೆದು, ಕಾಲಿನಿಂದ ನೆಲವನ್ನು ಬಡಿದು, ಇಸ್ರಾಯೇಲ್ ದೇಶವನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ಅದರ ಗತಿಗೆ ಹಿಗ್ಗಿಕೊಂಡೆ.
ಈ ಪ್ರವಾದನೆಯನ್ನು ನುಡಿಯಬೇಕೆಂದು ಕರ್ತನಾದ ಯೆಹೋವನ ಅಪ್ಪಣೆಯಾಯಿತು, “‘ಅಯ್ಯೋ, ಎಲ್ಲಾ ಕಡೆಯೂ ತುಳಿಯಲ್ಪಟ್ಟು ಹಾಳಾದ ನೀವು ಜನಾಂಗಗಳಲ್ಲಿ ಉಳಿದವರ ವಶವಾಗಿದ್ದು, ಹರಟೆಗಾರರ ಬಾಯಿಗೆ ಬಿದ್ದು, ಜನರ ದೂಷಣೆಗೆ ಗುರಿಯಾಗಿದ್ದೀರಿ.
¶ ನಿನ್ನ ತಮ್ಮನ ದುರ್ದಿನದಲ್ಲಿ ಅವನ ಅಪಾಯಕಾಲದಲ್ಲಿ ನೀನು ಸುಮ್ಮನೆ ನೋಡುತ್ತಿರಬಾರದಾಗಿತ್ತು. ಯೆಹೂದ್ಯರ ನಾಶನದ ದಿನದಲ್ಲಿ ಹಿಗ್ಗಬಾರದಾಗಿತ್ತು. ಅವರ ಇಕ್ಕಟ್ಟಿನ ವೇಳೆಯಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು.
¶ ಮೋವಾಬ್ಯರೂ, ಅಮ್ಮೋನ್ಯರೂ ಅಹಂಕಾರದಿಂದ ನನ್ನ ಜನರ ಮೇರೆಯನ್ನು ಮೀರಿ, ಅವರನ್ನು ನಿಂದಿಸಿ, ಅವರ ಮೇಲೆ ಹೊರಿಸಿರುವ ದೂರುದೂಷಣೆಗಳು ನನ್ನ ಕಿವಿಗೆ ಬಿದ್ದಿವೆ.