ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು. ನಿಮ್ಮ ದೇವಸ್ಥಾನಗಳನ್ನು ನಾಶಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಪರಿಮಳವನ್ನು ನಾನು ಮೂಸಿಯೂ ನೋಡುವುದಿಲ್ಲ.
TSK
TSK · ಪ್ರಲಾಪಗಳು 2:7
Treasury of Scripture Knowledge references in ಕನ್ನಡ IRV.
ಅವನು ಯೆಹೋವನ ಆಲಯವನ್ನೂ, ಅರಸನ ಅರಮನೆಯನ್ನೂ ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಹಾಗೂ ಪಟ್ಟಣದ ಮುಖ್ಯ ಕಟ್ಟಡಗಳನ್ನೂ ಸುಟ್ಟುಬಿಟ್ಟನು.
ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ; ದೀನರ ಮಕ್ಕಳನ್ನು ಉದ್ಧರಿಸಲಿ; ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ.
ನಿನ್ನ ದರ್ಶನಾಲಯದ ಮಧ್ಯದಲ್ಲಿ ನಿನ್ನ ವಿರೋಧಿಗಳು ಆರ್ಭಟಿಸುತ್ತಾರೆ; ನಮ್ಮ ಆರಾಧನಾ ಚಿಹ್ನೆಗಳನ್ನು ತೆಗೆದು ತಮ್ಮ ಚಿಹ್ನೆಗಳನ್ನು ಇಟ್ಟಿದ್ದಾರೆ.
ಯೆಹೋವನೇ, ಅತಿರೋಷಗೊಳ್ಳದಿರು, ನಮ್ಮ ಅಧರ್ಮವನ್ನು ಕಡೆಯವರೆಗೂ ಜ್ಞಾಪಕದಲ್ಲಿಡಬೇಡ; ಎಲೈ, ಕರ್ತನೇ, ಕಟಾಕ್ಷಿಸು, ನಾವೆಲ್ಲರೂ ನಿನ್ನ ಜನರಾಗಿದ್ದೇವೆ.
ನಾನು ನೋಡಲಾಗಿ ಫಲವತ್ತಾದ ಭೂಮಿಯು ಕಾಡಾಗಿತ್ತು, ಅಯ್ಯೋ! ಅಲ್ಲಿನ ಊರುಗಳೆಲ್ಲಾ ರೋಷಾಗ್ನಿಯುಕ್ತನಾದ ಯೆಹೋವನ ಪ್ರತ್ಯಕ್ಷತೆಯಿಂದ ಬಿದ್ದುಹೋಗಿದ್ದವು.
¶ “ನಾನು ಮೊದಲು ನನ್ನ ನಾಮವನ್ನು ಸ್ಥಾಪಿಸಿದ ಶೀಲೋವಿನಲ್ಲಿನ ನನ್ನ ಸ್ಥಾನಕ್ಕೆ ನೀವು ಹೋಗಿ ನನ್ನ ಜನರಾದ ಇಸ್ರಾಯೇಲರ ಅಧರ್ಮದ ನಿಮಿತ್ತ ಅದಕ್ಕೆ ತಂದ ಗತಿಯನ್ನು ನೋಡಿರಿ.
“ಯೆಹೂದದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕಾಯನು ಯೆಹೂದ್ಯರೆಲ್ಲರಿಗೆ, ‘ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಉಳಲಾಗುವುದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವುದು, ಯೆಹೋವನ ಆಲಯದ ಪರ್ವತವು ಕಾಡು ಗುಡ್ಡಗಳಂತಾಗುವುದು’ ಎಂದು ಹೇಳಲಾಗಿ
‘ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ, ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.
ಅವನು ಯೆಹೋವನ ಆಲಯವನ್ನೂ, ಅರಮನೆಯನ್ನೂ ಮತ್ತು ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.
ಕರ್ತನು ವೈರಿಯಾಗಿ ಇಸ್ರಾಯೇಲನ್ನು ನುಂಗಿದ್ದಾನೆ; ಅದರ ಅರಮನೆಗಳನ್ನೆಲ್ಲಾ ತಿಂದುಬಿಟ್ಟು ಅದರ ಕೋಟೆಕೊತ್ತಲಗಳನ್ನು ನಾಶಮಾಡಿದ್ದಾನೆ; ಯೆಹೂದ ಸೀಮೆಯಲ್ಲಿ ಪ್ರಲಾಪ ಮತ್ತು ಗೋಳಾಟವನ್ನು ಹೆಚ್ಚಿಸಿದ್ದಾನೆ.
ಹೀಗಿರಲು ನಾನು ಅತಿ ದುಷ್ಟ ಜನಾಂಗಗಳನ್ನು ಬರಮಾಡುವೆನು, ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುದು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರ ಸ್ಥಾನಗಳು ಹೊಲೆಗೆಡುವವು.
ಆದಕಾರಣ ನಾನು ಯೆಹೂದದ ಮೇಲೆ ಬೆಂಕಿಯನ್ನು ಉರಿಸುವೆನು. ಅದು ಯೆರೂಸಲೇಮಿನ ಅರಮನೆಗಳನ್ನು ನುಂಗಿಬಿಡುವುದು.”
ಆದರೆ ಅದಕ್ಕೆ ಉತ್ತರವಾಗಿ ಆತನು ಅವರಿಗೆ, ‹“ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ, ಎಲ್ಲಾ ಕೆಡವಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ”› ಅಂದನು.