TSK

TSK · ಪ್ರಲಾಪಗಳು 3:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನನ್ನ ಜೀವವು ಗಾಳಿಯಂತೆ ಇದೆಯೆಂತಲೂ, ನನ್ನ ಕಣ್ಣು ಇನ್ನು ಸುಖವನ್ನು ಕಾಣುವುದಿಲ್ಲವೆಂತಲೂ ನೆನಪು ಮಾಡಿಕೋ.

ಆಹಾ, ನಾನು ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ಆಯಿತು, ನನ್ನ ಆತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನ ಮೇಲೆ ಹಾಕಿಕೊಂಡಿದ್ದಿ.

ನಾವೆಲ್ಲರೂ ಕರಡಿಗಳಂತೆ ಗುರುಗುಟ್ಟುತ್ತೇವೆ, ಪಾರಿವಾಳಗಳಂತೆ ಮುಲುಗುತ್ತಲೇ ಇದ್ದೇವೆ; ನಾವು ಯೆಹೋವನ ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ನಮಗೆ ಸಿಕ್ಕದು, ಆತನ ರಕ್ಷಣಕಾರ್ಯವನ್ನು ನಿರೀಕ್ಷಿಸಿದರೂ ಅದು ನಮಗೆ ದೂರವಾಗಿರುವುದು.

ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ? ಚೀಯೋನನ್ನು ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದಿಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟುಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮ ಕಾಲವನ್ನೂ ಎದುರುನೋಡಿದೆವು, ಹಾ, ಅಂಜಿಕೆಯೇ!

ನಾನು ಹುಟ್ಟಿದ ದಿನ ಶಾಪಗ್ರಸ್ತವಾಗಲಿ, ತಾಯಿಯು ನನ್ನನ್ನು ಹೆತ್ತ ದಿನವು ಅಶುಭವೆನ್ನಿಸಿಕೊಳ್ಳಲಿ!

ಆ ಕಾಲಕ್ಕೆ ಮುಂಚೆ ಮನುಷ್ಯನಿಗಾಗಲಿ, ಪಶುವಿಗಾಗಲಿ ದುಡಿತದಿಂದ ಏನೂ ಜೀವನವಾಗುತ್ತಿರಲಿಲ್ಲ; ಹೋಗಿ ಬರುವವರಿಗೆ ಶತ್ರುಗಳ ದೆಸೆಯಿಂದ ಭಯವಿಲ್ಲದೆ ಇರಲಿಲ್ಲ; ಒಬ್ಬರನೊಬ್ಬರು ಎದುರಿಸುವಂತೆ ಎಲ್ಲರನ್ನೂ ಪ್ರೇರೇಪಿಸುತ್ತಿದ್ದರು.