TSK

TSK · ಪ್ರಲಾಪಗಳು 3:38

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಯೋಬನು ಆಕೆಗೆ, “ಮೂರ್ಖಳು ಮಾತನಾಡಿದಂತೆ ನೀನು ಮಾತನಾಡುತ್ತಿ. ದೇವರ ಹಸ್ತದಿಂದ ನಾವು ಒಳ್ಳೆಯದನ್ನು ಹೊಂದುವಾಗ ಕೆಟ್ಟದ್ದನ್ನು ಹೊಂದಬಾರದೋ?” ಎಂದು ಹೇಳಿದನು. ಈ ಸಂದರ್ಭದಲ್ಲಿಯೂ ಪಾಪದ ಮಾತು ಅವನ ತುಟಿಗಳಿಂದ ಹೊರಡಲಿಲ್ಲ.

ಅನೇಕರು ನ್ಯಾಯಾಧಿಪತಿಯ ಕಟಾಕ್ಷವನ್ನು ಕೋರುವರು, ನ್ಯಾಯತೀರ್ಪು ಯೆಹೋವನಿಂದಲೇ ಆಗುವುದು.

ನಾನು ಬೆಳಕನ್ನು, ಕತ್ತಲನ್ನು ನಿರ್ಮಿಸಿದವನು, ಮೇಲನ್ನೂ, ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.

ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವುದಿಲ್ಲವೋ? ಯೆಹೋವನಿಂದಲ್ಲದೆ ಪಟ್ಟಣಕ್ಕೆ ವಿಪತ್ತು ಸಂಭವಿಸುವುದೋ?