TSK

TSK · ಪ್ರಲಾಪಗಳು 4:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವುದರಿಂದ ನೀವು ನಿಮ್ಮ ಸಂತಾನವನ್ನೇ ಅಂದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಗಂಡು ಮತ್ತು ಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ.

ನಾವಿಬ್ಬರೂ ನನ್ನ ಮಗನನ್ನು ಕೊಂದು ಬೇಯಿಸಿ ತಿಂದು ಬಿಟ್ಟೆವು. ಮರುದಿನ ನಾನು ಆಕೆಗೆ, “ಈ ಹೊತ್ತು ನಿನ್ನ ಮಗನನ್ನು ತೆಗೆದುಕೊಂಡು ಬಾ, ಅವನನ್ನು ಕೊಂದು ತಿನ್ನೋಣ ಅಂದಾಗ ಆಕೆಯು ಅವನನ್ನು ಎಲ್ಲಿಯೋ ಅಡಗಿಸಿಟ್ಟಳು” ಎಂದು ಹೇಳಿದಳು.

ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ? ಒಂದು ವೇಳೆ ಮರೆತರು ಮರೆತಾಳು, ಆದರೆ ನಾನು ನಿನ್ನನ್ನು ಮರೆಯುವುದಿಲ್ಲ.

ಯೆಹೋವನೇ, ಕಟಾಕ್ಷಿಸು; ನೀನು ಇಷ್ಟೆಲ್ಲಾ ಮಾಡಿದ್ದು ಯಾರಿಗೆಂಬುವುದನ್ನು ನೋಡು, ಹೆಂಗಸರು ತಮ್ಮ ಗರ್ಭಫಲವನ್ನು, ತಾವು ನಲಿದಾಡಿಸಿದ ಮಕ್ಕಳನ್ನು ತಾವೇ ಕೊಂದು ತಿನ್ನುವುದು ಘೋರವಾದ ಪಾಪವಲ್ಲವೇ! ಯಾಜಕರೂ ಮತ್ತು ಪ್ರವಾದಿಗಳೂ ಕರ್ತನ ಪವಿತ್ರಾಲಯದಲ್ಲಿ ಹತರಾಗಬೇಕೋ?

ನರಿಗಳು ಕೂಡಾ ಮರಿಗಳಿಗೆ ಮೊಲೆಗೊಟ್ಟು ಸಾಕುತ್ತವೆ; ಆದರೆ ನನ್ನ ಜನವೆಂಬಾಕೆಯೋ ಕಾಡಿನ ಉಷ್ಟ್ರಪಕ್ಷಿಯಷ್ಟು ಕ್ರೂರಳಾಗಿದ್ದಾಳೆ.