ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ ಆಕಾಶದಿಂದ ಅಗ್ನಿಗಂಧಕಗಳನ್ನು ಸುರಿಸಿ
TSK
TSK · ಪ್ರಲಾಪಗಳು 4:6
Treasury of Scripture Knowledge references in ಕನ್ನಡ IRV.
ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.
ಯೆರೂಸಲೇಮಿನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ. ಅವರು ವ್ಯಭಿಚಾರಮಾಡಿ, ಮೋಸದಲ್ಲಿ ನಡೆದು, ದುಷ್ಟರಲ್ಲಿ ಯಾರೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ. ಅವರೆಲ್ಲರು ಸೊದೋಮಿನಂತೆ, ಆ ಪಟ್ಟಣದ ನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ.
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀನೂ ನಿನ್ನ ಕುಮಾರ್ತೆಯರೂ ನಡೆದಂತೆ ಸೊದೋಮೆಂಬ ನಿನ್ನ ತಂಗಿಯಾಗಲಿ, ಆಕೆಯ ಕುಮಾರ್ತೆಯರಾಗಲಿ ನಡೆಯಲಿಲ್ಲ.
ಆಹಾ, ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ, ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇಮಿಗೆ ಆದಂತಹ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.
‹ಏಕೆಂದರೆ ಲೋಕದ ಅರಂಭದಿಂದ ಇಂದಿನವರೆಗೂ ಆಗದಿರುವಂಥದ್ದು, ಇನ್ನು ಮೇಲೆಯೂ ಆಗದಿರುವಂತಹ ಮಹಾ ಸಂಕಟವು ಅಂದು ಉಂಟಾಗುವುದು.›
‹ತನ್ನ ಯಜಮಾನನ ಇಷ್ಟಾರ್ಥವನ್ನು ಆಳು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಕಠಿಣವಾದ ಶಿಕ್ಷೆಗೆ ಗುರಿಯಾಗುವನು.›