ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇಬಾರದು; ಅವನು ಹುಟ್ಟಿದಂದಿನಿಂದ ದೇವರಿಗೆ ಪ್ರತಿಷ್ಠಿತನಾಗಿರುವನು; ಇಸ್ರಾಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಲು ಪ್ರಾರಂಭಿಸುವನು” ಅಂದನು.
TSK
TSK · ಪ್ರಲಾಪಗಳು 4:7
Treasury of Scripture Knowledge references in ಕನ್ನಡ IRV.
ಆಗ ಅವನು, “ಕ್ಷೌರಕತ್ತಿಯು ನನ್ನ ತಲೆಯ ಮೇಲೆ ಮುಟ್ಟಿಸಿಲ್ಲ; ನಾನು ಮಾತೃಗರ್ಭದಿಂದಲೇ ದೇವರಿಗೆ ಪ್ರತಿಷ್ಠಿತನಾದವನು (ನಾಜೀರನು). ನನ್ನ ತಲೆಯನ್ನು ಕ್ಷೌರಮಾಡುವುದಾದರೆ ನನ್ನ ಶಕ್ತಿಯು ಹೋಗುವುದು; ಮತ್ತು ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು” ಎಂದು ತನ್ನ ಗುಟ್ಟನ್ನೆಲ್ಲಾ ಆಕೆಯ ಮುಂದೆ ಬಿಚ್ಚಿಹೇಳಿದನು.
ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.
ನನ್ನ ನಲ್ಲನು ತೇಜೋಮಯವಾದ ಕೆಂಪು ಬಣ್ಣವುಳ್ಳವನು; ಅವನು ಹತ್ತು ಸಾವಿರ ಜನರಲ್ಲಿ ಧ್ವಜಪ್ರಾಯನು.
ಅವರು ಹತ್ತು ದಿನಗಳ ನಂತರ ರಾಜನ ಆಹಾರವನ್ನು ಉಣ್ಣುತ್ತಿದ್ದ ಸಕಲ ಯುವಕರಿಗಿಂತ ಸುಂದರರಾಗಿಯೂ, ಪುಷ್ಟರಾಗಿಯೂ ಕಾಣಿಸಿದರು.
ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.