TSK

TSK · ಪ್ರಲಾಪಗಳು 5:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದೇವರೇ, ಮ್ಲೇಚ್ಛರು ನಿನ್ನ ಸ್ವತ್ತನ್ನು ಹೊಕ್ಕು, ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು; ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳನ್ನಾಗಿ ಮಾಡಿಬಿಟ್ಟರು.

ಪಟ್ಟಣ ಪ್ರದೇಶಗಳು ಹಾಳಾಗಿ ಪಶುಪಾಲಕರಿಗೆ ಹುಲ್ಲುಗಾವಲುಗಳಾಗುವವು. ಕುರಿಮರಿಗಳು ಅಲ್ಲಿ ಮೇಯುವವು.

ಅವರ ಹೆಂಡತಿ, ಮನೆ, ಹೊಲ ಮತ್ತು ಗದ್ದೆ ಇವೆಲ್ಲವುಗಳು ಅನ್ಯರ ಪಾಲಾಗುವವು. ದೇಶದ ನಿವಾಸಿಗಳ ಮೇಲೆ ಕೈಮಾಡುವೆನಷ್ಟೆ ಎಂದು ಯೆಹೋವನು ಹೇಳಿದ್ದಾನೆ.

ಅನ್ಯರ ಕೈಯಿಂದ ಕೊಳ್ಳೆಹೊಡೆಯಿಸಿ ಲೋಕದ ಅತಿ ದುಷ್ಟರಿಂದ ಸೂರೆಮಾಡಿಸುವೆನು; ಅವರು ಅದನ್ನು ಹೊಲೆಗೊಳಿಸುವರು.

ಅವರ ಆಸ್ತಿಯು ಸೂರೆಯಾಗುವುದು, ಅವರ ಮನೆಗಳು ಹಾಳಾಗುವವು; ಅವರು ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಿಸರು, ದ್ರಾಕ್ಷಾತೋಟಗಳನ್ನು ಮಾಡಿಕೊಂಡರೂ ಅವುಗಳ ದ್ರಾಕ್ಷಾರಸವನ್ನು ಕುಡಿಯರು.