ಕಿವಿಗೊಡು, ಯೆಹೋವನೇ ಕಿವಿಗೊಡು, ಯೆಹೋವನಾದ ನೀನೊಬ್ಬನೇ ದೇವರೂ! ಈ ಜನರ ಮನಸ್ಸನ್ನು ನಿನ್ನ ಕಡೆಗೆ ತಿರುಗಿಸಿಕೊಳ್ಳುವವನೂ ನೀನೇ ಆಗಿರುತ್ತೀ ಎಂಬುದನ್ನು ಇವರಿಗೆ ತಿಳಿಯಪಡಿಸು” ಎಂದು ಪ್ರಾರ್ಥಿಸಿದನು.
TSK
TSK · ಪ್ರಲಾಪಗಳು 5:21
Treasury of Scripture Knowledge references in ಕನ್ನಡ IRV.
ಸೇನಾಧೀಶ್ವರನಾದ ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.
ನಮ್ಮನ್ನು ರಕ್ಷಿಸುವ ದೇವರೇ, ನಮಗೆ ಅಭಿಮುಖನಾಗು; ನಮ್ಮ ವಿಷಯದಲ್ಲಿ ಬೇಸರವನ್ನು ಬಿಡು.
ಇಸ್ರಾಯೇಲೆಂಬ ಯುವತಿಯೇ, ನಾನು ನಿನ್ನ ಹಾಳುಪ್ರದೇಶಗಳನ್ನು ಪುನಃ ಕಟ್ಟುವೆನು; ಅವು ಕಟ್ಟಡಗಳಾಗುವವು. ನೀನು ಮತ್ತೆ ದಮ್ಮಡಿಗಳಿಂದ ವೈಭವಗೊಂಡು ವಿನೋದಪಡುವವರ ನಾಟ್ಯಗಳಲ್ಲಿ ಸೇರಿಕೊಳ್ಳುವಿ.
¶ ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ’ ಎಂದು ಮತ್ತೆ ಮಾತನಾಡುವರು.
ಯೆಹೋವನು ಇಂತೆನ್ನುತ್ತಾನೆ, “ಜನ ಮತ್ತು ಪಶುಗಳಿಲ್ಲದೆ ಹಾಳಾಗಿದೆ ಎಂದು ನೀವು ಹೇಳುವ ಈ ಸ್ಥಳದಲ್ಲಿ, ಅಂದರೆ ಜನ, ಪಶುರಹಿತವಾಗಿ ನಿವಾಸಿಗಳಿಲ್ಲದೆ ಹಾಳುಬಿದ್ದಿರುವ ಯೆಹೂದದ ಊರುಗಳಲ್ಲಿ, ಯೆರೂಸಲೇಮಿನ ಬೀದಿಗಳಲ್ಲಿ,
¶ “ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು.
¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಇನ್ನೊಂದು ವಿಷಯದಲ್ಲಿ ಇಸ್ರಾಯೇಲ್ ವಂಶದವರ ವಿಜ್ಞಾಪನೆಯನ್ನು ಲಾಲಿಸಿ ನೆರವೇರಿಸುವೆನು; ಅಂದರೆ ಅವರ ಜನಸಂಖ್ಯೆಯನ್ನು ಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.
ಯೆಹೋವನು ಇಂತೆನ್ನುತ್ತಾನೆ, “ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮ್ ಸತ್ಯದ ಪಟ್ಟಣವೆಂದು ಅನ್ನಿಸಿಕೊಳ್ಳುವುದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವುದು.”