TSK

TSK · ಯಾಜಕಕಾಂಡ 1:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು, ಅವನ ಮುಖವು ಸಿಟ್ಟಿನಿಂದ ಕಳೆಗುಂದಿತು.

ಅದು ಸಮರ್ಪಕವಾಗುವಂತೆ ದನಗಳಿಂದಾಗಲಿ ಅಥವಾ ಆಡು ಮತ್ತು ಕುರಿಗಳಿಂದಾಗಲಿ ಪೂರ್ಣಾಂಗವಾದ ಗಂಡನ್ನೇ ಸಮರ್ಪಿಸಬೇಕು.

¶ ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕೊಟ್ಟನು.

ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ. ಕಾಣಿಕೆ ಸಹಿತ ಆತನ ಸನ್ನಿಧಿಗೆ ಬನ್ನಿರಿ. ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ.

¶ ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.

ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.