TSK

TSK · ಯಾಜಕಕಾಂಡ 1:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದನ್ನೆಲ್ಲಾ ಯಜ್ಞವೇದಿಯ ಮೇಲೆ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಹೋಮವಾಗಿದೆ.

ಅದರ ಕರುಳುಗಳನ್ನು ಹಾಗು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಸುಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.

ಅದನ್ನು ಆರೋನನ ವಂಶದವರಾದ ಯಾಜಕರ ಬಳಿಗೆ ತರಬೇಕು. ಯಾಜಕನು ದೇವರಿಗೆ ನೈವೇದ್ಯವಾದದ್ದನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಆ ಎಣ್ಣೆ ಬೆರೆಸಿದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.

ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಆ ಉಮ್ಮಿಗೆಯಲ್ಲಿಯೂ ಮತ್ತು ಎಣ್ಣೆಯಲ್ಲಿಯೂ ಸ್ವಲ್ಪಭಾಗವನ್ನು ತೆಗೆದುಕೊಂಡು ಧೂಪವೆಲ್ಲವನ್ನು ಅದಕ್ಕೆ ಸೇರಿಸಿ ಅಗ್ನಿಯ ಮೂಲಕ ಯೆಹೋವನಿಗೆ ಹೋಮಮಾಡಬೇಕು.

ಯಾಜಕನು ಯಜ್ಞವೇದಿಯ ಮೇಲೆ ಅವುಗಳನ್ನು ಹೋಮಮಾಡಬೇಕು. ಅದು ಯೆಹೋವನಿಗೆ ಅಗ್ನಿಯ ಮೂಲಕವಾಗಿ ಅರ್ಪಿಸಿದ ಆಹಾರವಾಗುವುದು.

ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಿಂದ ತೊಳೆದು, ಮೋಶೆ ಆ ಟಗರನ್ನು ಯಜ್ಞವೇದಿಯ ಮೇಲೆ ಪೂರ್ತಿಯಾಗಿ ಹೋಮ ಮಾಡಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳಯುಕ್ತ ಸರ್ವಾಂಗಹೋಮವಾಗಿತ್ತು.

ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ತೊಳೆದು ಯಜ್ಞವೇದಿಯಲ್ಲಿ ಸರ್ವಾಂಗಹೋಮದ್ರವ್ಯದ ಮೇಲಿಟ್ಟು ಹೋಮಮಾಡಿದನು.

¶ “‘ನೀನು ಸರ್ವಾಂಗಹೋಮ, ಹರಕೆಸಲ್ಲಿಸುವ ಯಜ್ಞ, ಬೇರೆ ವಿಧವಾದ ಸಮಾಧಾನಯಜ್ಞ ಇವುಗಳಿಗಾಗಿ ಹೋರಿಯನ್ನು ಯೆಹೋವನಿಗೆ ದಹನ ಬಲಿಗಾಗಿ ಸಿದ್ಧಮಾಡುವಾಗ,

ಸಾಯಂಕಾಲದಲ್ಲಿ ಇನ್ನೊಂದು ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುಗಂಧಕರ ಹೋಮವಾಗಿರುವುದು.

ಇದಲ್ಲದೆ ಅವನು ಹತ್ತು ಬೋಗುಣಿಗಳನ್ನು ಮಾಡಿಸಿ, ಅವುಗಳಲ್ಲಿ ಸರ್ವಾಂಗಹೋಮ ಸಮರ್ಪಣೆಯ ಸಾಮಾನುಗಳನ್ನು ತೊಳೆದು ಶುದ್ಧ ಮಾಡುವುದಕ್ಕಾಗಿ ಐದನ್ನು ಬಲಗಡೆಯಲ್ಲಿಯೂ, ಐದನ್ನು ಎಡಗಡೆಯಲ್ಲಿಯೂ ಇರಿಸಿದನು. ಆದರೆ ಆ ಕಡಲಿನೊಳಗಿನ ನೀರು ಯಾಜಕರ ಸ್ನಾನಮಾಡಿ ತಮ್ಮನ್ನು ಶುದ್ಧಮಾಡಿಕೊಳ್ಳುವುದಕ್ಕಾಗಿ ಇತ್ತು.

ನಿನಗೆ ಟಗರು ಮುಂತಾದ ಪುಷ್ಟಪಶುಗಳನ್ನು ಯಜ್ಞರೂಪವಾಗಿ ಸಮರ್ಪಿಸಿ, ಸುವಾಸನೆಯನ್ನು ಉಂಟುಮಾಡುವೆನು; ಯಜ್ಞಕ್ಕಾಗಿ ಹೋತ ಮತ್ತು ಹೋರಿಗಳನ್ನು ಅರ್ಪಿಸುವೆನು. ಸೆಲಾ

ನಾನು ಪ್ರಮಾಣ ಪೂರ್ವಕವಾಗಿ ಅವರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧ ಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಅರ್ಪಿಸುತ್ತಿದ್ದರು.’

¶ ಹೆಬ್ಬಾಗಿಲ ಕಂಬಗಳ ಪಕ್ಕದಲ್ಲಿ ಒಂದು ಕೋಣೆಯೂ, ಅದರ ದ್ವಾರವೂ ಕಾಣಿಸಿದವು. ಆ ಕೋಣೆಯೊಳಗೆ ಸರ್ವಾಂಗಹೋಮ ಪಶುಗಳ ಮಾಂಸವನ್ನು ತೊಳೆಯುತ್ತಿದ್ದರು.

¶ ‹“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪಾತ್ರೆ, ಬಟ್ಟಲು ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಆದರೆ ಅವುಗಳ ಒಳಗೆ ಸುಲಿಗೆಯಿಂದಲೂ, ದುರಾಶೆಯಿಂದಲೂ ತುಂಬಿರುತ್ತವೆ.›

ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.