TSK

TSK · ಯಾಜಕಕಾಂಡ 10:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆರೋನನೂ, ಅವನ ಮಕ್ಕಳೂ ದೇವದರ್ಶನ ಗುಡಾರದೊಳಗೆ ಹೋಗುವಾಗಲೂ, ಪವಿತ್ರಸ್ಥಾನದಲ್ಲಿ ಸೇವೆಮಾಡುವುದಕ್ಕೆ ಯಜ್ಞವೇದಿಯ ಹತ್ತಿರಕ್ಕೆ ಬರುವಾಗಲೂ ಇವುಗಳನ್ನು ಧರಿಸಿಕೊಂಡಿರಬೇಕು. ಇಲ್ಲವಾದರೆ ಅವರು ಆ ಅಪರಾಧದ ಫಲವನ್ನು ಅನುಭವಿಸಿ ಸತ್ತಾರು. ಅವನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮವಾಗಿದೆ.

ಹೋಮಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರೂ ತಿನ್ನಬಹುದು; ಅದು ಮಹಾಪರಿಶುದ್ಧವಾದುದರಿಂದ ಪವಿತ್ರಸ್ಥಳದೊಳಗೆ ಅದನ್ನು ತಿನ್ನಬೇಕು.

ದೇವರಿಗೆ ನೈವೇದ್ಯವಾದ ಆಹಾರದಲ್ಲಿ ಪರಿಶುದ್ಧವಾದದ್ದನ್ನು ಮತ್ತು ಮಹಾಪರಿಶುದ್ಧವಾದುದನ್ನು ಅವನು ಊಟಮಾಡಬಹುದು.

¶ ಆಗ ಯೆಹೋವನು ಆರೋನನಿಗೆ, “ದೇವದರ್ಶನದ ಗುಡಾರದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರೂ, ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರು ಮಾತ್ರವೇ ಆ ದೋಷದ ಫಲವನ್ನು ಅನುಭವಿಸಬೇಕು.

¶ “ಇದಲ್ಲದೆ, ನೀನು ನಿನ್ನ ಎಡಮಗ್ಗುಲಲ್ಲಿ ಮಲಗಿಕೋ. ಇಸ್ರಾಯೇಲ್ ವಂಶದವರ ಪಾಪದ ಭಾರವನ್ನು ಅದರ ಮೇಲಿಡಬೇಕು. ನೀನು ಎಡಮಗ್ಗುಲಲ್ಲಿ ಮಲಗುವ ದಿನಗಳ ಪ್ರಕಾರ ಅವರ ಪಾಪದ ಭಾರವನ್ನು ಹೊತ್ತುಕೊಂಡಿರಬೇಕು.

¶ ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.

ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.