ಮೋಶೆಯ ಅಪ್ಪಣೆಯ ಮೇರೆಗೆ ಅವರು ಸಮೀಪಕ್ಕೆ ಬಂದು ಸತ್ತವರು ತೊಟ್ಟುಕೊಂಡಿದ್ದ ನಿಲುವಂಗಿಗಳನ್ನು ತೆಗೆಯದೆ ಅವರ ಶವಗಳನ್ನು ಎತ್ತಿ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋದರು.
TSK
TSK · ಯಾಜಕಕಾಂಡ 10:2
Treasury of Scripture Knowledge references in ಕನ್ನಡ IRV.
¶ ಇವರು ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಅಭಿಷೇಕಹೊಂದಿದವರಾಗಿ ಪ್ರತಿಷ್ಠಿತರಾದ ಆರೋನನ ಮಕ್ಕಳು.
ಅಶುಭ ಸಮಾಚಾರವನ್ನು ತಂದ ಆ ಮನುಷ್ಯರು ಯೆಹೋವನ ಸನ್ನಿಧಿಯಲ್ಲಿ ವ್ಯಾಧಿಯಿಂದ ಸತ್ತರು.
¶ ನಂತರ ಯೆಹೋವನ ಬಳಿಯಿಂದ ಬೆಂಕಿಹೊರಟು, ಧೂಪವನ್ನು ಅರ್ಪಿಸುತ್ತಿದ್ದ ಆ ಇನ್ನೂರೈವತ್ತು ಮಂದಿಯನ್ನು ದಹಿಸಬಿಟ್ಟಿತು.
ನಾದಾಬ್ ಮತ್ತು ಅಬೀಹೂ ಎಂಬಿಬ್ಬರು ಯೆಹೋವನ ಸನ್ನಿಧಿಯಲ್ಲಿ ಆತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯಿಂದ ಧೂಪವನ್ನು ಸಮರ್ಪಿಸಿದ್ದರಿಂದ ಸತ್ತುಹೋದರು.
ಆಗ ಯೆಹೋವನು ಉಜ್ಜನ ಮೇಲೆ ಕೋಪಗೊಂಡು, ಈ ತಪ್ಪಿಗೆ ಅವನನ್ನು ಸಂಹರಿಸಿದನು. ಅವನು ಅಲ್ಲೇ ದೇವರ ಮಂಜೂಷದ ಬಳಿಯಲ್ಲಿ ಸತ್ತನು.
ಅದಕ್ಕೆ ಎಲೀಯನು ಪಂಚದಶಾಧಿಪತಿಗೆ, “ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ” ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.
ಉಜ್ಜನು ಮಂಜೂಷದ ಮೇಲೆ ಕೈಹಾಕಿದ್ದರಿಂದ ಯೆಹೋವನು ಅವನ ಮೇಲೆ ಕೋಪಗೊಂಡು ಅವನನ್ನು ಹತಮಾಡಿದನು. ಅವನು ಅಲ್ಲೇ ದೇವರ ಸನ್ನಿಧಿಯಲ್ಲಿ ಸತ್ತನು.
ನಾದಾಬ್ ಮತ್ತು ಅಬೀಹೂ ಎಂಬುವರು ಮಕ್ಕಳಿಲ್ಲದೆ ತಮ್ಮ ತಂದೆಗಿಂತ ಮೊದಲೇ ಸತ್ತು ಹೋದುದರಿಂದ ಎಲ್ಲಾಜಾರನೂ, ಈತಾಮಾರನೂ ಯಾಜಕ ಉದ್ಯೋಗವನ್ನು ನಡೆಸುತ್ತಿದ್ದರು.
ಈ ಮಾತುಗಳನ್ನು ಅನನೀಯನು ಕೇಳಿದ ತಕ್ಷಣವೇ ಬಿದ್ದು ಪ್ರಾಣಬಿಟ್ಟನು; ಕೇಳಿದವರೆಲ್ಲರಿಗೂ ಮಹಾ ಭಯ ಉಂಟಾಯಿತು.
ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ. ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಇದು ಎಚ್ಚರಿಕೆಯ ಮಾತುಗಳಾಗಿ ಬರೆದಿವೆ.