TSK

TSK · ಯಾಜಕಕಾಂಡ 11:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ದಾರಿಯು ಯಾವ ಹದ್ದಿಗೂ ತಿಳಿಯದು, ಗಿಡಗದ ಕಣ್ಣಿಗೂ ಬಿದ್ದಿಲ್ಲ.

ಹದ್ದು ಮೇಲಕ್ಕೆ ಹಾರಿ ಉನ್ನತದಲ್ಲಿ ಗೂಡುಮಾಡುವುದು ನಿನ್ನ ಅಪ್ಪಣೆಯಿಂದಲೋ?

¶ ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲು ಅರಿಯರು.

ನಮ್ಮನ್ನು ಹಿಂದಟ್ಟಿದವರು ಆಕಾಶದ ಹದ್ದುಗಳಿಗಿಂತ ವೇಗಿಗಳಾಗಿದ್ದರು. ಬೆಟ್ಟಗಳ ಮೇಲೆ ನಮ್ಮನ್ನು ಬೆನ್ನು ಹತ್ತಿ ಅರಣ್ಯದಲ್ಲಿ ಹೊಂಚುಹಾಕಿದರು.

ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿ ಓಡಬಲ್ಲವು, ಸಂಜೆಯ ತೋಳಗಳಿಗಿಂತ ಚುರುಕಾಗಿವೆ; ಅದರ ಸವಾರರು ರಭಸದಿಂದ ಹಾರಿಬರುವರು, ಬೇಟೆಯನ್ನು ಕಬಳಿಸಲು ಹಾರಿ ಬರುವ ರಣಹದ್ದಿನಂತೆ ದೂರದಿಂದ ಹಾರಿಬರುವರು.

¶ ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.

ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.