TSK

TSK · ಯಾಜಕಕಾಂಡ 11:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ಯಾವ ಪ್ರಾಣಿಯು ಮೆಲಕು ಹಾಕಿದರೂ ಗೊರಸು ಸೀಳಲಿರುವುದಿಲ್ಲವೋ ಮತ್ತು ಯಾವ ಪ್ರಾಣಿಯು ಗೊರಸು ಸೀಳಿದರೂ ಮೆಲಕು ಹಾಕುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆಗೆ, ಒಂಟೆಯು ಮೆಲಕುಹಾಕುವಂಥದು ಸರಿ; ಆದರೂ ಅದಕ್ಕೆ ಸೀಳುಗೊರಸು ಇಲ್ಲವಾದುದರಿಂದ ನೀವು ಅದರ ಮಾಂಸವನ್ನು ಅಶುದ್ಧವೆಂದೆಣಿಸಬೇಕು.

ಅಂತಹವು ಸಂಪೂರ್ಣವಾಗಿ ನಿಷಿದ್ಧವಾಗಿರುವುದರಿಂದ ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಹೆಣಗಳು ನಿಮಗೆ ಅಸಹ್ಯವಾಗಿರಬೇಕು.

ಆದರೆ ಕಾಲುಳ್ಳ ಯಾವ ಕ್ರಿಮಿಕೀಟಗಳಿಗೆ ನೆಲದ ಮೇಲೆ ಹಾರುವುದಕ್ಕೋಸ್ಕರ ಮುದುರಿಕೊಂಡಿರುವ ತೊಡೆಗಳು ಇರುತ್ತವೆಯೋ ಅವುಗಳನ್ನು ನೀವು ತಿನ್ನಬಹುದು.

ಅದರಲ್ಲಿರುವ ತಿನ್ನತಕ್ಕ ಪದಾರ್ಥವೆಲ್ಲಾ ನೀರಿನಿಂದ ನೆನದರೆ ಅಶುದ್ಧವಾಗುವುದು. ಪಾನ ದ್ರವ್ಯವು ಆ ಪಾತ್ರೆಯಲ್ಲಿದ್ದರೆ ಅದೂ ಅಶುದ್ಧವಾಗುವುದು.

¶ “‘ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೆಲ್ಲಾ ಅಸಹ್ಯವಾಗಿವೆ; ಅವುಗಳ ಮಾಂಸವನ್ನು ತಿನ್ನಬಾರದು.

¶ ಆದರೆ ದಾನಿಯೇಲನು ರಾಜನ ಭೋಜನ ಪದಾರ್ಥಗಳನ್ನು ತಿಂದು ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನು ಅಶುದ್ಧ ಮಾಡಿಕೊಳ್ಳಬಾರದೆಂದು ನಿಶ್ಚಯಿಸಿ ಕಂಚುಕಿಯರ ಅಧ್ಯಕ್ಷನಿಗೆ, “ನಾನು ಅಶುದ್ಧನಾಗಲಾರೆ, ಕ್ಷಮಿಸು” ಎಂದು ವಿಜ್ಞಾಪಿಸಿದನು.

‹ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದು ಅವನನ್ನು ಮೈಲಿಗೆ ಮಾಡುವುದಿಲ್ಲ; ಆದರೆ ಮನುಷ್ಯನೊಳಗಿನಿಂದ ಹೊರಗೆ ಬರುವಂಥದು ಮನುಷ್ಯನನ್ನು ಮೈಲಿಗೆ ಮಾಡುವಂಥವುಗಳಾಗಿವೆ”› ಎಂದು ಹೇಳಿದನು.

ಒಬ್ಬನು ಯಾವುದನ್ನಾದರೂ ತಿನ್ನಬಹುದೆಂದು ನಂಬುತ್ತಾನೆ; ನಂಬಿಕೆಯಲ್ಲಿ ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ.

ದೇವರು ಉಂಟುಮಾಡಿದ್ದೆಲ್ಲವೂ ಒಳ್ಳೆಯದೇ, ನಾವು ಕೃತಜ್ಞತಾಸ್ತುತಿಮಾಡಿ ತೆಗೆದುಕೊಳ್ಳುವ ಯಾವ ಆಹಾರವನ್ನು ತಿರಸ್ಕರಿಸಬೇಕಾಗಿಲ್ಲ.

ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ.