TSK

TSK · ಯಾಜಕಕಾಂಡ 11:29

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “‘ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೆಲ್ಲಾ ಅಸಹ್ಯವಾಗಿವೆ; ಅವುಗಳ ಮಾಂಸವನ್ನು ತಿನ್ನಬಾರದು.

ಯೆಹೋವನೇ, ನೀನು ಅವನಿಗೆ ಎದುರಾಗಿ ನಿಂತು ಅವನನ್ನು ಕೆಡವಿಬಿಡು; ನಿನ್ನ ಕತ್ತಿಯಿಂದ ನನ್ನ ಪ್ರಾಣವನ್ನು ದುಷ್ಟರಿಗೆ ತಪ್ಪಿಸಿ ಕಾಪಾಡು.

ತಮ್ಮ ಮಧ್ಯದಲ್ಲಿನ ಒಬ್ಬನನ್ನು ಅನುಸರಿಸಿ, ತೋಟಗಳೊಳಗೆ ಪ್ರವೇಶಿಸುವುದಕ್ಕೆ ತಮ್ಮನ್ನು ಪವಿತ್ರಮಾಡಿಕೊಂಡು, ಹಂದಿಯ ಮಾಂಸವನ್ನು, ಅಶುದ್ಧಪದಾರ್ಥವನ್ನೂ, ಇಲಿಯನ್ನೂ ತಿನ್ನುವವರು ಒಟ್ಟಿಗೆ ಅಂತ್ಯ ಕಾಣುವರು” ಎಂದು ಯೆಹೋವನು ನುಡಿಯುತ್ತಾನೆ.

ಜನರಿಗೆ, ‹“ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ”› ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.

ಯೇಸು ಅವರಿಗೆ ‹“ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ಆ ರೊಟ್ಟಿ ತಿಂದು ಹೊಟ್ಟೆ ತುಂಬಿಸಿಕೊಂಡಿದ್ದರಿಂದಲೇ.›

ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ,

¶ ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.

ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.