TSK

TSK · ಯಾಜಕಕಾಂಡ 11:40

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಆದುದರಿಂದ ಕಾಡುಮೃಗ ಕೊಂದದ್ದನ್ನು ನೀವು ತಿನ್ನಬಾರದು, ಅದನ್ನು ನಾಯಿಗಳಿಗೆ ಬಿಡಬೇಕು.

ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಅವು ನಿಮಗೆ ಅಶುದ್ಧ.

ಆ ಮನೆಯು ಮುಚ್ಚಿರುವ ದಿನಗಳಲ್ಲಿ ಯಾವನಾದರೂ ಒಳಕ್ಕೆ ಹೋದರೆ ಅವನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.

ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ಅವನಿಗಾಗಿ ದೋಷಪರಿಹಾರ ಮಾಡುವನು.

¶ “ಅಜಾಜೇಲನಿಗೆ ಹೋತವನ್ನು ಬಿಟ್ಟುಬಂದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯಕ್ಕೆ ಬರಬೇಕು.

¶ “‘ತಾನಾಗಿ ಸತ್ತುಬಿದ್ದದ್ದನ್ನಾಗಲಿ ಅಥವಾ ಕಾಡುಮೃಗ ಕೊಂದದ್ದನ್ನು ತಿಂದವನಾಗಲಿ ಸ್ವದೇಶದವನಾದರೂ ಇಲ್ಲವೇ ಅನ್ಯದೇಶದವನಾದರೂ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಆ ಸಾಯಂಕಾಲದ ವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು.

ಅವನು ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗದಿಂದ ಕೊಲ್ಲಲ್ಪಟ್ಟ ಪ್ರಾಣಿಗಳನ್ನು ತಿಂದು ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು; ನಾನು ಯೆಹೋವನು.

ಶುದ್ಧನಾದವನು ಮೂರನೆಯ ದಿನದಲ್ಲಿಯೂ, ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಅದನ್ನು ಚಿಮಿಕಿಸಬೇಕು. ಅಶುದ್ಧನಾದವನು ಏಳನೆಯ ದಿನದಲ್ಲಿ ದೋಷಪರಿಹಾರ ಹೊಂದಿದವನಾಗಿ ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸ್ನಾನಮಾಡಿ ಸಾಯಂಕಾಲದಲ್ಲಿ ಶುದ್ಧನಾಗುವನು.

ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ,

ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.

¶ ಆ ದಿನದಲ್ಲಿ ಪಾಪವನ್ನೂ, ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ, ಯೆರೂಸಲೇಮಿನವರಿಗೂ ತೆರೆದಿರುವುದು.

ನೀವು ಕರ್ತನ ಪಾನಪಾತ್ರೆಯಲ್ಲಿಯೂ ಹಾಗೂ ದೆವ್ವಗಳ ಪಾನಪಾತ್ರೆಯಲ್ಲಿಯೂ ಕುಡಿಯಲಾರಿರಿ. ಕರ್ತನ ಪಂಕ್ತಿಯಲ್ಲಿಯೂ ಮತ್ತು ದೆವ್ವಗಳ ಪಂಕ್ತಿಯಲ್ಲಿಯೂ ಊಟಮಾಡಲಾರಿರಿ.