ಒಂದೂವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಧಾನ್ಯಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಂಗಡ ಅರ್ಪಿಸಬೇಕು. ಪಾನದ್ರವ್ಯಾರ್ಪಣೆಗಾಗಿ ಒಂದು ಪಾವು ದ್ರಾಕ್ಷಾರಸವನ್ನು ಅದರೊಂದಿಗೆ ಅರ್ಪಿಸಬೇಕು.
TSK
TSK · ಯಾಜಕಕಾಂಡ 14:10
Treasury of Scripture Knowledge references in ಕನ್ನಡ IRV.
¶ “‘ಒಬ್ಬನು ಆಡನ್ನಾಗಲಿ ಅಥವಾ ಕುರಿಯನ್ನಾಗಲಿ ಸರ್ವಾಂಗಹೋಮವನ್ನಾಗಿ ಅರ್ಪಿಸಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು.
¶ “‘ನೀವು ಯೆಹೋವನಿಗೆ ಧಾನ್ಯ ನೈವೇದ್ಯವಾಗಿ ಸಮರ್ಪಿಸುವ ಯಾವ ಪದಾರ್ಥವನ್ನು ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಅಥವಾ ಜೇನುತುಪ್ಪವನ್ನಾಗಲಿ ಯೆಹೋವನಿಗೆ ಹೋಮಮಾಡಬಾರದು.
¶ “‘ಅವನು ತನ್ನ ದೋಷಪರಿಹಾರಕ್ಕಾಗಿ ತರುವುದು ಕುರಿಯಾದರೆ ಅದು ಪೂರ್ಣಾಂಗವಾದ ಹೆಣ್ಣಾಗಿರಬೇಕು.
ಯಾಜಕನು ಆ ಟಗರುಗಳಲ್ಲಿ ಒಂದನ್ನು ಮತ್ತು ಆ ಒಂದು ಸೇರು ಎಣ್ಣೆಯನ್ನು ಪ್ರಾಯಶ್ಚಿತ್ತಯಜ್ಞವಾಗಿ ಸಮರ್ಪಿಸಬೇಕು. ಅವುಗಳನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು.
¶ “ಅವನು ಬಡವನಾಗಿದ್ದು ಅಷ್ಟನ್ನು ಸಮರ್ಪಿಸುವುದಕ್ಕೆ ಆಗದಿದ್ದರೆ ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಂದು ಟಗರುಮರಿಯನ್ನು ತಂದು ದೋಷಪರಿಹಾರ ಮಾಡಿಸಿಕೊಳ್ಳುವುದಕ್ಕಾಗಿ ಯಾಜಕನ ಕೈಯಿಂದ ನೈವೇದ್ಯವಾಗಿ ನಿವಾಳಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ ಹತ್ತರಲ್ಲಿ ಒಂದು ಭಾಗ ಎಣ್ಣೆ ಕಲಸಿದ ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತರಬೇಕು.
¶ “‘ಸ್ರಾವವುಳ್ಳವನ ಸ್ರಾವವು ನಿಂತು ವಾಸಿಯಾದಾಗ, ಅವನು ಶುದ್ಧಮಾಡಿಸಿಕೊಳ್ಳುವುದಕ್ಕೆ ಆ ದಿನದಿಂದ ಏಳು ದಿನಗಳನ್ನು ಲೆಕ್ಕಮಾಡಿ, ತನ್ನ ಬಟ್ಟೆಗಳನ್ನು ಒಗೆದುಕೊಂಡು, ಹರಿಯುವ ನೀರಿನಿಂದ ತನ್ನ ಶರೀರವನ್ನು ತೊಳೆದುಕೊಂಡು ಶುದ್ಧನಾಗುವನು.
ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆಗಳು ಯಾವುವೆಂದರೆ: ಅವನು ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಟಗರಿನ ಮರಿಯನ್ನು, ದೋಷಪರಿಹಾರ ಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಹೆಣ್ಣು ಕುರಿಮರಿಯನ್ನು, ಸಮಾಧಾನಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಟಗರನ್ನು ತರಬೇಕು.
ಅದರೊಂದಿಗೆ ಯೆಹೋವನಿಗೆ ಕಾಣಿಕೆಯಾಗಿ ಧಾನ್ಯನೈವೇದ್ಯ ಸಮರ್ಪಿಸುವಾಗ ಒಂದುವರೆ ಸೇರು ಎಣ್ಣೆ ಬೆರಸಿದ ಮೂರು ಸೇರು ಗೋದಿಯ ಹಿಟ್ಟನ್ನೂ ಸೇರಿಸಬೇಕು.
ಆಗ ಯೇಸು ಅವನಿಗೆ; ‹“ನೋಡು, ಯಾರಿಗೂ ಹೇಳಬೇಡ;›‹ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇಮಿಸಿದ ಕಾಣಿಕೆಯನ್ನು ಕೊಡು;”›‹ಅದು ಅವರಿಗೆ ಸಾಕ್ಷಿಯಾಗಲಿ› ಎಂದು ಹೇಳಿದನು.
ಆಗ ಆತನು ಅವನಿಗೆ, ‹“ನೀನು ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ಆಜ್ಞಾಪಿಸಿರುವ ಕಾಣಿಕೆಯನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ”› ಎಂದು ಅಪ್ಪಣೆಕೊಟ್ಟನು.
‹ದೇವರು ಕೊಡುವ ಆ ರೊಟ್ಟಿ ಯಾವುದೆಂದರೆ, ಪರಲೋಕದಿಂದ ಇಳಿದು ಬಂದು ಲೋಕಕ್ಕೆ ಜೀವವನ್ನು ಉಂಟುಮಾಡುವಂಥದ್ದೇ” ಎಂದು ಹೇಳಿದನು.›
ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.