TSK

TSK · ಯಾಜಕಕಾಂಡ 14:40

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅನಂತರ ಆ ವಸ್ತ್ರಗಳನ್ನು ತೆಗೆದಿಟ್ಟು, ಬೇರೆ ವಸ್ತ್ರಗಳನ್ನು ಹಾಕಿಕೊಂಡು, ಆ ಬೂದಿಯನ್ನು ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.

ಮೋಸಗಾರನು ನನ್ನ ಮನೆಯಲ್ಲಿ ಇರಲೇಬಾರದು; ಸುಳ್ಳುಗಾರನು ನನ್ನ ಮುಂದೆ ನಿಲ್ಲಕೂಡದು.

ಬೆಳ್ಳಿಯಿಂದ ಕಲ್ಮಷವನ್ನು ತೆಗೆದುಹಾಕಿದರೆ, ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯಾಗುವುದು.

‹ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂ›‹ಸುಂಕದವನಂತೆಯೂ ಇರಲಿ.›

ಅವನನ್ನು ಸೈತಾನನಿಗೆ ಒಪ್ಪಿಸಿರಿ ಯಾಕೆಂದರೆ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವುದಕ್ಕಾಗಿ ಅವನ ಶರೀರಭಾವವು ನಾಶವಾಗುವಂತೆ ಕರ್ತನಾದ ಯೇಸುವಿನ ಶಕ್ತಿಯಿಂದ ತೀರ್ಪು ಮಾಡಿದ್ದೇನೆ.

ಸಭೆಯಲ್ಲಿ ಭಿನ್ನಭೇದಗಳನ್ನುಂಟುಮಾಡುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟು ಬಿಡು;

¶ ‹“ನಿನ್ನ ಕೃತ್ಯಗಳನ್ನೂ, ಪ್ರಯಾಸವನ್ನೂ, ತಾಳ್ಮೆಯನ್ನೂ, ಬಲ್ಲೆನು. ನೀನು ದುರ್ಜನರನ್ನು ಸಹಿಸಲಾರೆ, ಅಪೊಸ್ತಲರಲ್ಲದಿದ್ದರೂ›‹ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು›‹ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ.›

‹ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ.›‹ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ›‹ಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು›‹ಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ.›

‹ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ›‹ಹೊರಗಿರುವರು”› ಎಂದು ಹೇಳಿದನು.