TSK

TSK · ಯಾಜಕಕಾಂಡ 14:46

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಸಾಯಂಕಾಲದವರೆಗೂ ಅಶುದ್ಧನಾಗಿರುವನು.

ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಅವು ನಿಮಗೆ ಅಶುದ್ಧ.

ಇವುಗಳ ಹೆಣವು ಯಾವ ವಸ್ತುವಿನ ಮೇಲೆ ಬೀಳುವುದೋ ಆ ವಸ್ತುವು ಅಶುದ್ಧವಾಗಿರುವುದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ, ಚರ್ಮವಾಗಲಿ ಅಥವಾ ಗೋಣಿಯಾಗಲಿ ಅದು ಎಂಥದಾದರೂ, ಯಾವ ಕೆಲಸಕ್ಕೆ ಉಪಯೋಗವಾಗಿದ್ದರೂ ಅದನ್ನು ನೀರಿನಲ್ಲಿ ನೆನಸಬೇಕು; ಅದು ಆ ಸಾಯಂಕಾಲದ ವರೆಗೂ ಅಶುದ್ಧವಾಗಿರುವುದು; ತರುವಾಯ ಶುದ್ಧಿಯಾಗುವುದು.

ಆ ಹೆಣದಲ್ಲಿ ಸ್ವಲ್ಪವಾಗಿ ತಿಂದರೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.

ಅವನ ಕೆಳಗಿದ್ದ ಯಾವ ವಸ್ತುವನ್ನಾದರೂ ಮುಟ್ಟಿದವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಅಂತಹ ವಸ್ತುವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.

¶ “‘ಅಶುದ್ಧವಾದುದನ್ನು ಮುಟ್ಟುವ ಯಾಜಕನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಆದುದರಿಂದ ಸ್ನಾನಮಾಡುವ ತನಕ ಅವನು ನೈವೇದ್ಯದ್ರವ್ಯವನ್ನು ತಿನ್ನಬಾರದು.

¶ “ಇದು ಇಸ್ರಾಯೇಲರಿಗೆ ಶಾಶ್ವತ ನಿಯಮವಾಗಿರುವುದು. ಶುದ್ಧೀಕರಣದ ಆ ನೀರನ್ನು ಚಿಮಿಕಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ನೀರು ಯಾರಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.