¶ ನಾನು ನಿನಗೆ ಆಜ್ಞಾಪಿಸಿದ ರೀತಿಯಲ್ಲಿ ಏಳು ದಿನಗಳ ಕಾಲ ಹೀಗೆ ಅವರನ್ನು ಪ್ರತ್ಯೇಕಿಸಿ ಪ್ರತಿಷ್ಠಿಸಬೇಕು. ಆರೋನನನ್ನೂ ಅವನ ಮಕ್ಕಳನ್ನೂ ಸೇವೆಗೆ ಪ್ರತಿಷ್ಠಿಸಬೇಕು.
TSK
TSK · ಯಾಜಕಕಾಂಡ 15:13
Treasury of Scripture Knowledge references in ಕನ್ನಡ IRV.
ಇದಲ್ಲದೆ ಈ ನಿಮ್ಮ ಯಾಜಕೋದ್ಯೋಗದ ದೀಕ್ಷೆಯು ಪೂರೈಸುವುದಕ್ಕೆ ಏಳು ದಿನಗಳು ಆಗುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲಿನ ಆಚೆಗೆ ಹೋಗಬಾರದು.
ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೆ ಇರಬೇಕು.
ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
ಅವಳಿಗೆ ರಕ್ತಸ್ರಾವ ನಿಂತ ದಿನದಿಂದ ಅವಳು ಏಳು ದಿನಗಳನ್ನು ಲೆಕ್ಕ ಹಾಕಿಕೊಂಡ ತರುವಾಯ ಶುದ್ಧಳಾಗುವಳು.
¶ “ಮನುಷ್ಯನ ಶವ ಸೋಂಕಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.
ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.