¶ “‘ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಂಥದ್ದು ಪಕ್ಷಿಜಾತಿಯಾಗಿದ್ದರೆ ಅದು ಬೆಳವಕ್ಕಿಯಾಗಲಿ ಅಥವಾ ಪಾರಿವಾಳದ ಮರಿಯಾಗಲಿ ಆಗಿರಬೇಕು.
TSK
TSK · ಯಾಜಕಕಾಂಡ 15:14
Treasury of Scripture Knowledge references in ಕನ್ನಡ IRV.
ಕುರಿಯನ್ನು ಕೊಡುವುದಕ್ಕೆ ಗತಿಯಿಲ್ಲದಿದ್ದರೆ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಸರ್ವಾಂಗಹೋಮಕ್ಕಾಗಿ ಒಂದನ್ನು, ದೋಷಪರಿಹಾರಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು. ಯಾಜಕನು ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಶುದ್ಧಳಾಗುವಳು’” ಎಂಬುದೆ.
ಅವನು ತನ್ನ ಶುದ್ಧೀಕರಣಕ್ಕಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯೆಹೋವನ ಸನ್ನಿಧಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.
ಎಂಟನೆಯ ದಿನದಲ್ಲಿ ಅವನು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.
¶ ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.
ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.