TSK

TSK · ಯಾಜಕಕಾಂಡ 16:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಸುಗಂಧ ದ್ರವ್ಯ ತಯಾರಿಸುವವರ ಕೌಶಲ್ಯಕ್ಕೆ ತಕ್ಕಂತೆ ಕಲಿಸಿ ಉಪ್ಪು ಹಾಕಿ ದೇವರ ಸೇವೆಗೆ ಪವಿತ್ರವಾದ ಧೂಪದ್ರವ್ಯವನ್ನು ಮಾಡಿಸಬೇಕು.

¶ ಅದಲ್ಲದೆ ಅವನು ದೇವರ ಪವಿತ್ರ ಸೇವೆಗೆ ನೇಮಕವಾದ ಪಟ್ಟಾಭಿಷೇಕತೈಲವನ್ನೂ ಪರಿಮಳದ್ರವ್ಯಗಳಿಂದ ಮಾಡಿದ ಸ್ವಚ್ಛವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಮಾಡುವವರ ವಿಧಾನದ ಪ್ರಕಾರವೇ ತಯಾರಿಸಿದನು.

ಅದಕ್ಕೆ ಅನುಸಾರವಾಗಿ ಅವರೆಲ್ಲರೂ ತಮ್ಮ ತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಅವುಗಳಲ್ಲಿ ಕೆಂಡಗಳನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಮತ್ತು ಆರೋನರ ಜೊತೆಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನಲ್ಲಿ ನಿಂತುಕೊಂಡರು.

¶ ಆಗ ಸೆರಾಫಿಯರಲ್ಲಿ ಒಬ್ಬನು ಯಜ್ಞವೇದಿಯಿಂದ ತಾನು ಉರಿಯುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ನನ್ನ ಬಳಿಗೆ ಹಾರಿ ಬಂದು,

ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.