TSK

TSK · ಯಾಜಕಕಾಂಡ 16:32

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆರೋನನಿಗೂ ಅವನ ಮಕ್ಕಳಿಗೂ ನಡುಕಟ್ಟುಗಳನ್ನು ಕಟ್ಟಿಸಿ ಮುಂಡಾಸಗಳನ್ನು ಇಡಬೇಕು. ಅಂದಿನಿಂದ ಯಾಜಕತ್ವವು ಅವರಿಗೆ ಶಾಶ್ವತವಾದ ಹಕ್ಕಾಗಿರುವುದು. ಹೀಗೆ ಆರೋನನೂ ಅವನ ಮಕ್ಕಳೂ ಯಾಜಕ ಸೇವೆಗೆ ಪ್ರತಿಷ್ಠಿತರಾಗಿರುವರು.

ಅವನ ಮಕ್ಕಳಲ್ಲಿ ಅವನಿಗೆ ಬದಲಾಗಿ ಮಹಾಯಾಜಕನಾಗುವವನು ಪವಿತ್ರಸ್ಥಾನದಲ್ಲಿ ದೇವರ ಸೇವೆಯನ್ನು ನಡೆಸುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಂದಿನಿಂದ ಏಳು ದಿನಗಳವರೆಗೆ ಆ ವಸ್ತ್ರಗಳನ್ನು ಧರಿಸಿಕೊಂಡಿರಬೇಕು.

ಅಭಿಷಿಕ್ತ ಯಾಜಕನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನದ ಗುಡಾರದೊಳಗೆ ಬರಬೇಕು.

ಅವನು ಪರಿಶುದ್ಧವಾದ ನಾರಿನ ನಿಲುವಂಗಿಯನ್ನು ತೊಟ್ಟುಕೊಂಡು, ನಾರಿನ ಒಳಉಡುಪನ್ನು ಹಾಕಿಕೊಂಡು, ನಾರಿನ ನಡುಕಟ್ಟನ್ನು ಕಟ್ಟಿಕೊಂಡು ಮತ್ತು ತಲೆಗೆ ನಾರಿನ ಪೇಟವನ್ನು ಸುತ್ತಿಕೊಳ್ಳಬೇಕು. ಅವು ದೀಕ್ಷಾವಸ್ತ್ರಗಳಾದುದರಿಂದ ಅವನು ಅವುಗಳನ್ನು ಧರಿಸಿಕೊಳ್ಳುವುದಕ್ಕೆ ಮುಂಚೆ ಸ್ನಾನಮಾಡಬೇಕು.