TSK

TSK · ಯಾಜಕಕಾಂಡ 17:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದನ್ನು ಯೆಹೋವನಿಗೆ ಸಮರ್ಪಿಸುವುದಕ್ಕಾಗಿ ಆತನ ಗುಡಾರದ ಬಾಗಿಲಿಗೆ ತಾರದೆ, ಪಾಳೆಯದ ಒಳಗಾಗಲಿ ಅಥವಾ ಹೊರಗಾಗಲಿ ವಧಿಸಿದರೆ ಅವನನ್ನು ಕೊಲೆಪಾತಕನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.

ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಯ ಅರ್ಧ ಜನರು ಇಸ್ರಾಯೇಲ ದೇಶವಾದ ಕಾನಾನಿನ ಪೂರ್ವಕ್ಕಿರುವ ಯೊರ್ದನ್ ನದಿಯ ತೀರಪ್ರದೇಶದಲ್ಲಿ ಯಜ್ಞವೇದಿಯನ್ನು ಕಟ್ಟಿದ್ದಾರೆಂಬ ವರ್ತಮಾನವು ಮಿಕ್ಕ ಇಸ್ರಾಯೇಲರಿಗೂ ತಿಳಿದಾಗ,

“ಯೆಹೋವನ ಸರ್ವ ಸಭೆಯ ಮಾತನ್ನು ಕೇಳಿರಿ; ನೀವು ಇಸ್ರಾಯೇಲಿನ ದೇವರಿಗೆ ವಿರುದ್ಧವಾಗಿ ಇಂಥ ದ್ರೋಹ ಮಾಡಿದ್ದೇಕೆ? ನಿಮಗೋಸ್ಕರ ಯಜ್ಞವೇದಿಯನ್ನು ಕಟ್ಟಿಕೊಂಡದ್ದರಿಂದ ನೀವು ಯೆಹೋವನಿಗೆ ದ್ರೋಹ ಮಾಡಿದಂತಾಯಿತು; ನೀವು ಈ ಹೊತ್ತು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದಂತಾಯಿತು.

ಆಗ ಸಮುವೇಲನು ಹಾಲುಕುಡಿಯುವ ಕುರಿಮರಿಯನ್ನು ತಂದು ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿ ಇಸ್ರಾಯೇಲ್ಯರಿಗೋಸ್ಕರ ಮೊರೆಯಿಡಲು ಆತನು ಸದುತ್ತರವನ್ನು ದಯಪಾಲಿಸಿದನು.

ಅದಕ್ಕೆ ಸಮುವೇಲನು, “ನಾನು ಹೋಗುವುದು ಹೇಗೆ? ಇದು ಸೌಲನಿಗೆ ಗೊತ್ತಾದರೆ ಅವನು ನನ್ನನ್ನು ಕೊಂದುಹಾಕುವನಲ್ಲವೇ” ಎಂದನು. ಅದಕ್ಕೆ ಯೆಹೋವನು, “ನೀನು ಒಂದು ಕರುವನ್ನು ತೆಗೆದುಕೊಂಡು ಹೋಗಿ ಯೆಹೋವನಿಗೋಸ್ಕರ ಯಜ್ಞಮಾಡುವುದಕ್ಕೆ ಬಂದಿದ್ದೇನೆಂದು ಹೇಳಿ ಇಷಯನನ್ನು ಅದಕ್ಕಾಗಿ ಕರೆ.

¶ ಅನಂತರ ಎಲೀಯನು ಎಲ್ಲಾ ಜನರನ್ನು ಹತ್ತಿರಕ್ಕೆ ಕರೆಯಲು ಅವರು ಬಂದರು. ಅವನು ಹಾಳಾಗಿದ್ದ ಅಲ್ಲಿ ಯೆಹೋವನ ಯಜ್ಞವೇದಿಯನ್ನು ತಿರುಗಿ ಕಟ್ಟಿಸಿದನು.