ಆದುದರಿಂದ ಸ್ವದೇಶದವರಾದ ನಿಮ್ಮಲ್ಲಿಯೂ ಮತ್ತು ನಿಮ್ಮ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಿಯೂ ಯಾರೂ ಈ ಅಸಹ್ಯವಾದ ಕಾರ್ಯಗಳಲ್ಲಿ ಒಂದನ್ನಾದರೂ ನಡೆಸದೆ ಎಲ್ಲರೂ ನನ್ನ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಬೇಕು.
TSK
TSK · ಯಾಜಕಕಾಂಡ 18:30
Treasury of Scripture Knowledge references in ಕನ್ನಡ IRV.
ಯಾಜಕರು ಈ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸತ್ತಾರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.
ನೀವು ಭ್ರಮೆಗೊಂಡು ನಿಮ್ಮ ಎದುರಿನಿಂದ ನಾಶವಾಗಿ ಹೋದವರ ದುಷ್ಟಪದ್ಧತಿಗಳನ್ನು ಅನುಸರಿಸಬಾರದು. ನೀವು, “ಈ ದೇಶದ ಜನರು ತಮ್ಮ ದೇವರುಗಳನ್ನು ಹೇಗೆ ಸೇವಿಸುತ್ತಿದ್ದರೋ ಹಾಗೆಯೇ ನಾವೂ ಸೇವಿಸುವೆವು” ಎಂದು ಹೇಳಿಕೊಳ್ಳುವವರಾಗಿ ಅವರ ದೇವರುಗಳ ವಿಷಯದಲ್ಲಿ ವಿಚಾರಣೆಯನ್ನು ಎಷ್ಟು ಮಾತ್ರವೂ ಮಾಡಬಾರದು.
¶ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದಾಗ ಅಲ್ಲಿರುವ ಜನಗಳು ಮಾಡುವ ಅಸಹ್ಯವಾದ ಕೆಲಸಗಳನ್ನು ನೀವು ಅನುಸರಿಸಲೇಬಾರದು.
ಇದಲ್ಲದೆ ಅವರ ದೇಶದಲ್ಲಿ ವೇಶ್ಯಾವೃತ್ತಿಯನ್ನು ಅನುಸರಿಸುತ್ತಿರುವ ದೇವದಾಸ, ದೇವದಾಸಿಯರು ಇದ್ದರು. ಯೆಹೋವನು ಅವರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳಲ್ಲಿದ್ದ ದುರಾಚಾರಗಳನ್ನೆಲ್ಲಾ ಅವರೂ ಆಚರಿಸುವವರಾದರು.
¶ ಇದಾದನಂತರ ಪ್ರಧಾನಪುರುಷರು ನನ್ನ ಬಳಿಗೆ ಬಂದು, “ಇಸ್ರಾಯೇಲರಲ್ಲಿ ಸಾಧಾರಣಜನರೂ, ಯಾಜಕರೂ, ಲೇವಿಯರೂ, ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸಿಯರು, ಅಮ್ಮೋನಿಯರು, ಮೋವಾಬ್ಯರು, ಐಗುಪ್ತ್ಯರು ಮತ್ತು ಅಮೋರಿಯರು ಎಂಬ ಅನ್ಯ ದೇಶಗಳವರ ಬಳಿಕೆಯನ್ನು ತೊರೆಯದೆ ಅವರ ಅಸಹ್ಯಕಾರ್ಯಗಳನ್ನು ಅನುಸರಿಸಿದ್ದಾರೆ.