TSK

TSK · ಯಾಜಕಕಾಂಡ 19:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “‘ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವುದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನ್ನನ್ನು ಯೆಹೋವನು ಮೆಚ್ಚುವಂತೆ ದೇವದರ್ಶನದ ಗುಡಾರದ ಬಾಗಿಲಿಗೆ ಅದನ್ನು ತರಬೇಕು.

¶ “‘ಸಮಾಧಾನಯಜ್ಞಕ್ಕಾಗಿ ಯೆಹೋವನಿಗೆ ಸಮರ್ಪಿಸುವಂಥದು ಕುರಿ ಅಥವಾ ಆಡು ಆಗಿರುವ ಪಕ್ಷದಲ್ಲಿ, ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಪೂರ್ಣಾಂಗವಾಗಿರಬೇಕು.

ಆ ಯಜ್ಞಪಶುವಿನ ಮಾಂಸದಲ್ಲಿ ಸ್ವಲ್ಪವನ್ನಾದರೂ ಮೂರನೆಯ ದಿನದಲ್ಲಿ ಊಟಮಾಡಿದರೆ ಆ ಯಜ್ಞವು ಸಮರ್ಪಕವಾದದ್ದಲ್ಲ; ಅರ್ಪಿಸಿದವನಿಗೆ ಅದರಿಂದ ಫಲವೇನೂ ದೊರೆಯುವುದಿಲ್ಲ. ಅದು ಅಸಹ್ಯವಾದುದರಿಂದ ಅದನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸಬೇಕು.

ಯಾವನಾದರೂ ಸಮಾಧಾನಯಜ್ಞಕ್ಕಾಗಿ ಹರಕೆಯಾಗಿ ಅಥವಾ ಕಾಣಿಕೆಯಾಗಿ ದನವನ್ನು ಅಥವಾ ಹಿಂಡಿನ ಆಡು ಇಲ್ಲವೇ ಕುರಿಗಳನ್ನು ತಂದರೆ ಅವು ಯೆಹೋವನಿಗೆ ಸಮರ್ಪಕವಾಗುವುದಕ್ಕಾಗಿ ಅದು ಪೂರ್ಣಾಂಗವಾಗಿಯೇ ಇರಬೇಕು; ಅದರಲ್ಲಿ ಯಾವ ಕುಂದುಕೊರತೆಯೂ ಇರಬಾರದು.

¶ “ನೀವು ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಯೆಹೋವನಿಗೆ ಮಾಡುವ ಯಜ್ಞವನ್ನು ಮೆಚ್ಚಿಗೆಯಾದ ರೀತಿಯಲ್ಲೇ ಸಮರ್ಪಿಸಬೇಕು.

ಇನ್ನೂರು ಕುರಿಗಳಲ್ಲಿ ಇಸ್ರಾಯೇಲಿನ ನೀರಾವರಿಯ ಹುಲ್ಗಾವಲಿನ ಒಂದು ಕುರಿ; ಇವುಗಳನ್ನು ದೇಶದ ಸಕಲ ಜನರು ಇಸ್ರಾಯೇಲಿನ ಅರಸನಿಗೆ ಸರ್ವಾಂಗಹೋಮ ಮತ್ತು ಸಮಾಧಾನಬಲಿಯಾಗಿ ಒಪ್ಪಿಸಬೇಕು” ಇದು ಕರ್ತನಾದ ಯೆಹೋವನ ನುಡಿ.

ಅರಸನು ಸ್ವಂತ ಇಚ್ಛೆಯಿಂದ ಕಾಣಿಕೆಯನ್ನಾಗಲಿ, ಸರ್ವಾಂಗಹೋಮವನ್ನಾಗಲಿ, ಸಮಾಧಾನ ಯಜ್ಞಗಳನ್ನಾಗಲಿ ಯೆಹೋವನಿಗೆ ಸಮರ್ಪಿಸುವಾಗ ಅವನಿಗಾಗಿ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ತೆರೆಯಬೇಕು. ಅವನು ಸಬ್ಬತ್ ದಿನದಲ್ಲಿ ಸಮರ್ಪಿಸುವಂತೆ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞಪಶುಗಳನ್ನೂ ಸಮರ್ಪಿಸಿ ಹೊರಡಲಿ. ಹೊರಟ ಮೇಲೆ ಬಾಗಿಲನ್ನು ಮುಚ್ಚಬೇಕು.