TSK

TSK · ಯಾಜಕಕಾಂಡ 2:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಕಾಲಾಂತರದಲ್ಲಿ ಕಾಯಿನನು ಹೊಲದ ಬೆಳೆಯಲ್ಲಿ ಕೆಲವನ್ನು ತಂದು ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಿದನು.

“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದ ನಂತರ ಅಲ್ಲಿನ ಜವೆಗೋದಿಯ ಪೈರನ್ನು ಕೊಯ್ಯುವಾಗ, ಪ್ರಥಮಫಲದ ಸಿವುಡನ್ನು ಯಾಜಕನ ಬಳಿಗೆ ತಂದು ಒಪ್ಪಿಸಬೇಕು.

ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದದ್ದನ್ನು ತಂದು ಕೊಡುವವರೆಗೂ ಆ ವರ್ಷದ ಬೆಳೆಯ ರೊಟ್ಟಿಯನ್ನಾಗಲಿ, ಸುಟ್ಟ ತೆನೆಗಳನ್ನಾಗಲಿ ಅಥವಾ ಹಸಿತೆನೆಗಳನ್ನಾಗಲಿ ತಿನ್ನಲೇಬಾರದು. ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ವಾಸಸ್ಥಾನಗಳಲ್ಲಿಯೂ ಇದು ಶಾಶ್ವತನಿಯಮ.

“ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುಗಂಧಹೋಮಮಾಡುವುದಕ್ಕಾಗಿ ಇಸ್ರಾಯೇಲರು ನನಗೋಸ್ಕರ ತರುವ ಆಹಾರವನ್ನು ನೇಮಕವಾದ ಕಾಲಗಳಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ಅವರಿಗೆ ಆಜ್ಞಾಪಿಸು.’

¶ ಒಂದು ದಿನ ಬಾಳ್ ಷಾಲಿಷಾ ಊರಿನ ಒಬ್ಬ ಮನುಷ್ಯನು ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ, ಒಂದು ಚೀಲದ ತುಂಬಾ ಹಸೀ ತೆನೆಗಳನ್ನೂ, ಪ್ರಥಮಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೇವರ ಮನುಷ್ಯನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ, “ಇದನ್ನು ಜನರಿಗೆ ಕೊಡು ಅವರು ಊಟಮಾಡಲಿ” ಎಂದು ಹೇಳಿದನು.

ಒಣನೆಲದೊಳಗೆ ಬೇರಿನಿಂದ ಹೊರಡುವ ಸಸಿಯಂತೆಯೂ, ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.

¶ ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದನು. ಸತ್ತುಹೋದವರಲ್ಲಿ ಪ್ರಥಮಫಲವಾದನು.