TSK

TSK · ಯಾಜಕಕಾಂಡ 2:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹೀಗೆ ಏಳು ದಿನಗಳವರೆಗೂ ಯಜ್ಞವೇದಿಯ ನಿಮಿತ್ತವಾಗಿ ದೋಷಪರಿಹಾರಕ ಆಚಾರವನ್ನು ನಡಿಸಿ ಅದನ್ನು ಪ್ರತಿಷ್ಠಿಸಬೇಕು. ಯಜ್ಞವೇದಿಯು ಅತಿ ಪರಿಶುದ್ಧವಾಗಿರಬೇಕು. ಯಜ್ಞವೇದಿಯನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು.

ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ, ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದನಂತರ ಅವನಿಗೆ ಕ್ಷಮಾಪಣೆಯಾಗುವುದು. ಧಾನ್ಯನೈವೇದ್ಯ ದ್ರವ್ಯದಲ್ಲಿ ಉಳಿದದ್ದು ಹೇಗೆ ಯಾಜಕನಿಗೆ ಸಲ್ಲುತ್ತದೋ ಇದರಲ್ಲಿಯೂ ಉಳಿದದ್ದು ಯಾಜಕನಿಗೆ ಸಲ್ಲಬೇಕು.’”

ಉಳಿದದ್ದನ್ನು ಆರೋನನೂ ಮತ್ತು ಅವನ ವಂಶದವರೂ ತಿನ್ನಬಹುದು; ಅವರು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿಕೊಂಡು ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ತಿನ್ನಬೇಕು.

ಪ್ರಾಯಶ್ಚಿತ್ತಯಜ್ಞದ ಹೋಮಶೇಷದ ವಿಷಯದಲ್ಲಿಯೂ ಮತ್ತು ದೋಷಪರಿಹಾರಕ ಯಜ್ಞದ ಹೋಮಶೇಷದ ವಿಷಯದಲ್ಲಿಯೂ ಒಂದೇ ನಿಯಮಯುಂಟು; ಹೇಗೆಂದರೆ ಆ ಹೋಮಶೇಷವು ದೋಷಪರಿಹಾರವನ್ನು ಮಾಡಿಸುವ ಯಾಜಕನಿಗೆ ಸಲ್ಲತಕ್ಕದ್ದು.

¶ ಮೋಶೆ ಆರೋನನಿಗೂ ಅವನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರಿಗೆ, “ಯೆಹೋವನಿಗೆ ಅಗ್ನಿಯ ಮೂಲಕ ಸಮರ್ಪಿತವಾದ ದ್ರವ್ಯಗಳಲ್ಲಿ ಉಳಿದಿರುವ ಧಾನ್ಯನೈವೇದ್ಯ ದ್ರವ್ಯವನ್ನು ತೆಗೆದುಕೊಂಡು, ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿ, ಯಜ್ಞವೇದಿಯ ಬಳಿಯಲ್ಲಿ ಊಟಮಾಡಬೇಕು. ಅದು ಮಹಾಪರಿಶುದ್ಧವಾಗಿದೆ.

ದೋಷಪರಿಹಾರಕ ಯಜ್ಞಪಶುವನ್ನು ಮತ್ತು ಸರ್ವಾಂಗಹೋಮ ಪಶುವನ್ನು ವಧಿಸುವ ಸ್ಥಳದಲ್ಲೇ ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಗರು ವಧಿಸಲ್ಪಡಬೇಕು. ಏಕೆಂದರೆ ದೋಷಪರಿಹಾರಕ ಯಜ್ಞದ್ರವ್ಯದಂತೆಯೇ ಪ್ರಾಯಶ್ಚಿತ್ತ ಯಜ್ಞದ್ರವ್ಯವೂ ಯಾಜಕನಿಗೆ ಸಲ್ಲತಕ್ಕದ್ದು, ಅದು ಮಹಾಪರಿಶುದ್ಧವಾಗಿವೆ.

ಬೆಂಕಿಯಲ್ಲಿ ಹೋಮಮಾಡದೆ ಉಳಿದಿರುವ ಮಹಾ ಪರಿಶುದ್ಧ ವಸ್ತುಗಳು ನಿನಗೆ ಕಾಣಿಕೆಯಾಗಿ ಸಲ್ಲಬೇಕು. ಇಸ್ರಾಯೇಲರು ನನಗೆ ಸಮರ್ಪಿಸುವ ಎಲ್ಲಾ ಧಾನ್ಯದ್ರವ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ ಇವುಗಳಲ್ಲಿ ಹೋಮಶೇಷವು ಮಹಾಪರಿಶುದ್ಧವಾದುದರಿಂದ ನಿನಗೂ ನಿನ್ನ ಸಂತತಿಯವರಿಗೂ ಸಲ್ಲಬೇಕು.

ಅವರು ಧಾನ್ಯನೈವೇದ್ಯವನ್ನೂ ದೋಷಪರಿಹಾರಕ ಯಜ್ಞದ್ರವ್ಯವನ್ನೂ, ಪ್ರಾಯಶ್ಚಿತ್ತ ಯಜ್ಞದ್ರವ್ಯವನ್ನೂ ಅನುಭವಿಸಲಿ; ಕೇವಲ ಯೆಹೋವನದಾಗಿಯೇ ಇರಲೆಂದು ಇಸ್ರಾಯೇಲರಲ್ಲಿ ಹರಕೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.