ಯಾಜಕಕಾಂಡ 18:2
TSK
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮ್ಮ ದೇವರಾಗಿರುವ ಯೆಹೋವನು.
TSK
Treasury of Scripture Knowledge references in ಕನ್ನಡ IRV.
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮ್ಮ ದೇವರಾಗಿರುವ ಯೆಹೋವನು.
¶ “‘ಈ ದುರಾಚಾರಗಳಲ್ಲಿ ಯಾವುದರಿಂದಲೂ ನೀವು ಅಶುದ್ಧರಾಗಬಾರದು. ನಾನು ನಿಮ್ಮ ಎದುರಿನಿಂದ ಮೊದಲು ಹೊರಡಿಸಿದ ಜನಾಂಗಗಳವರು ಇಂಥ ದುರಾಚಾರಗಳಿಂದ ಅಶುದ್ಧರಾದರು.
ಆದುದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡೆಸಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದೆ ನನ್ನ ನಿಯಮಗಳನ್ನೇ ಅನುಸರಿಸಿ ನಡೆಯಬೇಕು; ನಾನು ನಿಮ್ಮ ದೇವರಾದ ಯೆಹೋವನು’” ಎಂದು ಹೇಳಿದನು.
ನೀವು ಭ್ರಮೆಗೊಂಡು ನಿಮ್ಮ ಎದುರಿನಿಂದ ನಾಶವಾಗಿ ಹೋದವರ ದುಷ್ಟಪದ್ಧತಿಗಳನ್ನು ಅನುಸರಿಸಬಾರದು. ನೀವು, “ಈ ದೇಶದ ಜನರು ತಮ್ಮ ದೇವರುಗಳನ್ನು ಹೇಗೆ ಸೇವಿಸುತ್ತಿದ್ದರೋ ಹಾಗೆಯೇ ನಾವೂ ಸೇವಿಸುವೆವು” ಎಂದು ಹೇಳಿಕೊಳ್ಳುವವರಾಗಿ ಅವರ ದೇವರುಗಳ ವಿಷಯದಲ್ಲಿ ವಿಚಾರಣೆಯನ್ನು ಎಷ್ಟು ಮಾತ್ರವೂ ಮಾಡಬಾರದು.
ಇಸ್ರಾಯೇಲ್ ವಂಶದವರೇ, ಯೆಹೋವನು ನಿಮಗೆ ನುಡಿಯುವ ಮಾತನ್ನು ಕೇಳಿರಿ;